Breaking News

ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ

Spread the love

ಬೆಂಗಳೂರು,ಡಿ.14- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ಈ ಸಭೆಯ ರಹಸ್ಯವನ್ನು ಕರ್ನಾಟಕ ಬಿಜೆಪಿ ಟ್ವೀಟ್ ಮೂಲಕ ಬಿಚ್ಚಿಟ್ಟಿದೆ, ಕಾಂಗ್ರೆಸ್ ನಾಯಕರ ವಿರುದ್ಧ ಟೀಕೆ ಮಾಡಿದೆ.

 

ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‍ನ ಒಳಜಗಳ ದಿನೇ ದಿನೇ ಹೆಚ್ಚಾಗಿ ಬೀದಿರಂಪವಾಗುತ್ತಿದೆ. ಇವರೆಲ್ಲ ದೇಶೋದ್ಧಾರಕ್ಕಾಗಿ ಗುದ್ದಾಡಿಕೊಳ್ಳುತ್ತಿಲ್ಲ ಎಂದು ವ್ಯಂಗ್ಯವಾಡಿದೆ.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜಗಳ ಬೀದಿಗೆ ಬಂದಿದೆ ಎಂದು ಕರ್ನಾಟಕ ಬಿಜೆಪಿ ಟ್ವೀಟ್‍ನಲ್ಲಿ ಹೇಳಿದೆ. ಉಭಯನಾಯಕರ ಜಗಳದ ತಾಜಾ ವಿವರಗಳು ನಿಮ್ಮ ಮುಂದೆ ಇಡುತ್ತೇವೆ ಕೇಳಿ ಎಂದು ಬಿಜೆಪಿ ಹೇಳಿದೆ.

ಮೊದಲ ಟ್ವೀಟ್‍ನಲ್ಲಿ ಕರ್ನಾಟಕ ಬಿಜೆಪಿ, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್‍ನ ಒಳಜಗಳ ದಿನೇದಿನೇ ಹೆಚ್ಚಾಗಿ ಬೀದಿರಂಪವಾಗುತ್ತಿದೆ. ಇವರೆಲ್ಲ ದೇಶೋದ್ಧಾರಕ್ಕಾಗಿ ಗುದ್ದಾಡಿಕೊಳ್ಳುತ್ತಿಲ್ಲ. ಬದಲಿಗೆ ದೊಡ್ಡ ನಾಯಕರೆನಿಸಿಕೊಂಡವರು ಕೇವಲ ಅಕಾರಕ್ಕಾಗಿ ಮುನಿಸು-ಜಗಳ ಆರಂಭಿಸಿದ್ದಾರೆ. ಇದರ ತಾಜಾ ವಿವರಗಳು ನಿಮ್ಮಮುಂದೆ ಇಡ್ತೀವಿಕೇಳಿ ಎಂದಿದೆ.

ಮತ್ತೊಂದು ಟ್ವೀಟ್‍ನಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜಗಳ ಬೀದಿಗೆ ಬರುತ್ತಿದ್ದಂತೆ ಎಲ್ಲಿ ತನ್ನ ಮಗನ ಪ್ರಧಾನಿ ಕನಸು ಬೀದಿಪಾಲು ಆದೀತು ಎಂದು ಬೆದರಿದ ಸೋನಿಯಾ ಗಾಂಧಿ, ತಕ್ಷಣವೇ ತಮ್ಮ ಕೈಗೊಂಬೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕರೆಸಿ,ಜಗಳ ಬಂದ್‍ಮಾಡಿಸಲು ತಾಕೀತು ಮಾಡಿದ್ದಾರೆ. ಇದಕ್ಕೆ “ಜೀ ಹುಜೂರ್” ಎಂದು ಸಭೆ ಕರೆಸಿದ್ದು ಎಂದು ಬಿಜೆಪಿ ವ್ಯಂಗ್ಯವಾಡಿದೆ.

 


Spread the love

About Laxminews 24x7

Check Also

ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು….

Spread the love ಗಣೇಶೋತ್ಸವದ ಹಿನ್ನಲ್ಲೆಯಲ್ಲಿ ಬೆಳಗಾವಿಯಲ್ಲಿ ಭಾರಿ ವಾಗನಗಳ ಮಾರ್ಗ ಬದಲಾವಣೆ ಮಾಡಿದ ನಗರ ಪೊಲೀಸರು…. ಅದ್ದೂರಿ ಗಣೇಶೋತ್ಸವಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ