ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶೈಕ್ಷಣಿಕ ಸಮಸ್ಯೆ ಬಗೆಹರಿಸಬೇಕು.
ಪದವಿ ಪರಿಕ್ಷೆ ಫಲಿತಾಂಶ ನಿಗದಿತ ಸಮಯದಲ್ಲಿ ಪ್ರಕಟಿಸಬೇಕು. ಪದೇ ಪದೇ ವಿದ್ಯಾರ್ಥಿಗಳ ಪಠ್ಯಕ್ರಮ ಬದಲಾವಣೆ ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳ ಶುಲ್ಕ ಕಡಿಮೆ ಮಾಡಬೇಕು. ಪ್ರಶ್ನೆ ಪತ್ರಿಕೆ ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಪ್ರಿಂಟ್ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Laxmi News 24×7