ಬೆಳಗಾವಿಯ ಮಹಾಲಕ್ಷ್ಮೀ ಮಹಿಳಾ ಮಂಡಳದ 32ನೇ ವಾರ್ಷಿಕೋತ್ಸವ ಅತ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು.
ನಗರದ ಮಹಾಂತ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ವೇದಿಕೆ ಮೇಲಿದ್ದ ಗಣ್ಯರು ಚಾಲನೆ ನೀಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಲೇಖಕಿಯರ ಸಂಘದ ಸಂಸ್ಥಾಪಕ ಜಿಲ್ಲಾಧ್ಯಕ್ಷೆ ಆಶಾ ಕಡಪಟ್ಟಿ ಕಳೆದ 32 ವರ್ಷಗಳಿಂದ ಮಹಾಲಕ್ಷ್ಮೀ ಮಹಿಳಾ ಮಂಡಳ ಬಹಳಷ್ಟು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಹಿಳೆಯರಿಗೆ ಉತ್ತಮ ವೇದಿಕೆ ಕಲ್ಪಿಸಿಕೊಟ್ಟಿದೆ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾಲಕ್ಷ್ಮೀ ಮಹಿಳಾ ಮಂಡಳ ಅಧ್ಯಕ್ಷೆ ಪ್ರಭಾ ಪಾಟೀಲ ಮಹಳೆಯರು ತಮ್ಮ ಮನೆ ಬಿಟ್ಟು ಹೊರಗೆ ಬಂದು ತಮ್ಮಲ್ಲಿರುವ ಪ್ರತಿಭೆ ಪ್ರದರ್ಶಿಸಬೇಕು. ಮಹಿಳೆಯರಿಗೆ ಮಾತ್ರ ಎಲ್ಲ ರೀತಿ ಪ್ರೋತ್ಸಾಹ ನೀಡಲು ನಮ್ಮ ಮಹಿಳಾ ಮಂಡಳ ಸಿದ್ಧವಿದೆ ಎಂದರು.
Laxmi News 24×7