Breaking News

ಬಿಜೆಪಿಗೆ ಬಿಗ್ ಶಾಕ್: ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್ ಪಾಟೀಲ್

Spread the love

ಬೆಂಗಳೂರು: ಯಲ್ಲಾಪುರ ಮಾಜಿ ಶಾಸಕರಾದ ವಿ.ಎಸ್ ಪಾಟೀಲ್ ( Former MLC V S Patil ) ಹಾಗೂ ಶ್ರೀನಿವಾಸ್ ಭಟ್ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.

ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

 

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ‘ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು.

ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು. ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ.

ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಕಳೆದ ಚುನಾವಣೆಯಲ್ಲಿ ಕೇವಲ 1480 ಮತಗಳ ಅಂತರದಲ್ಲಿ ಸೋತಿದ್ದರು. ಕೆಎಸ್‌ಆರ್ ಟಿಸಿ ಚೇರ್ಮನ್ ಆಗಿದ್ದರು ಎಂದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ