Breaking News

ಗೋಕಾಕ: ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಶಾಸಕ ರಮೇಶ ಜಾರಕಿಹೊಳಿ ಉದ್ಘಾಟಿಸಿದರು.

Spread the love

ಗೋಕಾಕ: ಬಿಜೆಪಿ ಪಕ್ಷ ಕೇಂದ್ರ ಹಾಗೂ ರಾಜ್ಯದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರು ತಮ್ಮಲ್ಲಿರುವ ವೈಮನಸ್ಸುಗಳನ್ನು ಬದಿಗಿಟ್ಟು ಸರಕಾರದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕಾರ್ಯ ಯುವ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಯುವ ಮೋರ್ಚಾ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಬಿಜೆಪಿ ಸರಕಾರ ಬಡವರ ದೀನ ದಲಿತರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಸಮಾಜದ ಕಟ್ಟ ಕಡೆಯ ವ್ಯಕ್ತಿ ವರೆಗೆ ತಲುಪಿಸಲು ಪಕ್ಷದ ಯುವ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ರಾಜ್ಯದ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಕಾರ್ಯಕರ್ತರು ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಲು ಸನ್ನದ್ಧರಾಗಿ ಮತ್ತೊಮ್ಮೆ ಬಿಜೆಪಿ ಸರಕಾರ ರಾಜ್ಯದ ಚುಕ್ಕಾಣಿ ಹಿಡಿಯಲು ಈಗಿನಿಂದಲೆ ಕಾರ್ಯಪ್ರವೃತ್ತರಾಗುವಂತೆ ತಿಳಿಸಿದರು.
ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ ಮಾತನಾಡಿ, ನಮ್ಮ ದೇಶ ವಿಶ್ವದಲ್ಲಿಯೇ ಅತಿ ಹೆಚ್ಚು ಯುವ ಸಮುದಾಯವನ್ನು ಹೊಂದಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಚಿiÀುವರು ಯುವ ಸಮುದಾಯಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಅರಿವು ಮೂಢಿಸುವ ಕಾರ್ಯವಾಗಬೇಕು. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಯುವ ಮೋರ್ಚಾ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ ಎಂದರು.
ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ನೇಸರಗಿ ಪಕ್ಷ ನೀಡಿರುವ ಕೇಲಸವನ್ನು ಶಿಸ್ತು ಬದ್ಧವಾಗಿ ಮಾಡಿ, ಮುಂಬರುವ ಯುವ ಪದಾಧಿಕಾರಿಗಳಿಗೆ ನಾವು ಮಾದರಿಯಾಬೇಕು ಎಂದರು.
ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ ಪ್ರಾಸ್ತಾವಿಕಾಗಿ ಮಾತನಾಡಿದರು.
ವೇದಿಕೆಯ ಮೇಲೆ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಯುವ ಮೋರ್ಚಾ ಅಧ್ಯಕ್ಷರುಗಳಾದ ಮಂಜುನಾತ ಪ್ರಭುನಟ್ಟಿ, ಆನಂದ ಅತ್ತುಗೋಳ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೇತನ ಪಾಟೀಲ, ಜಿಲ್ಲಾ ಕಾರ್ಯದರ್ಶಿ ಬೀರಪ್ಪ ಖಿಲಾರಿ ಸೇರಿದಂತೆ ಯುವ ಮೋರ್ಚಾ ಪದಾಧಿಕಾರಿಗಳು ಇದ್ದರು.


Spread the love

About Laxminews 24x7

Check Also

ಮಹೇಶ್ ಶೆಟ್ಟಿ ತಿಮರೋಡಿ ಕರೆತರುವಾಗ ಪೊಲೀಸ್​ ಕರ್ತವ್ಯಕ್ಕೆ ಅಡ್ಡಿ; ಮೂವರು ಬೆಂಗಲಿಗರ ಬಂಧನ

Spread the loveಉಡುಪಿ: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬ್ರಹ್ಮಾವರ ಠಾಣೆಗೆ ಕರೆತರುತ್ತಿರುವಾಗ ವಾಹನಗಳನ್ನು ಹಿಂಬಾಲಿಸಿಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ