ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳಿಗೆ ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸಖಿ ಕೇಂದ್ರಗಳನ್ನು ಆರಂಭಿಸಲಾಗಿದೆ.
ಸಮಾಜ ಅಥವಾ ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ, ಸಮಾಲೋಚನೆಗಾಗಿ ಪ್ರತ್ಯೇಕವಾಗಿ ಅಲೆದಾಡಬೇಕಿತ್ತು. ಇದೀಗ ಪೊಲೀಸ್ ಠಾಣೆ, ಮಹಿಳಾ ಸಾಂತ್ವನ ಕೇಂದ್ರಗಳಿಗೆ ಹೋದ ದೂರುಗಳು ಸಖಿ ಕೇಂದ್ರಗಳಿಗೆ ಶಿಫಾರಸು ಮಜಾಡಲಾಗುತ್ತಿದೆ.
2018 ರ ಮೇ ತಿಂಗಳಲ್ಲಿ ರಾಝ್ಯ ಸರ್ಕಾರ ಗೆಳತಿ ವಿಶೇಷ ಚಿಕಿತ್ಸಾ ಘಟಕ ಸ್ಥಾಪಿಸಿತ್ತು. ಇದನ್ನು ಕೇಂದ್ರ ಸರ್ಕಾರದ ವ್ಯಾಪ್ತಿಗೆ ತರಲಾಗಿದ್ದು, ಸಖಿ ಒನ್ ಸ್ಟಾಪ್ ಸೆಂಟರ್ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಖಿ ಒನ್ ಸ್ಟಾಪ್ ಸೆಂಟರ್ ಗೆ ದೂರು ಸಲ್ಲಿಸಬೇಕಾದವರು 1091 ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಬಹುದು.
Laxmi News 24×7