ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ ಯುವತಿಯರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು.ನಿರುದ್ಯೋಗಿ ಯುವಕ ಯುವರಿತರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದೆ ಎಂದರು.