Breaking News

ನೇಕಾರರಿಗೆ ಮಗ್ಗ ನಡೆಸಲು ಸಿಗುತ್ತೆ ಉಚಿತ ವಿದ್ಯುತ್​; ಸಿಎಂ

Spread the love

ಬೆಂಗಳೂರು: ಪವರ್ ಲೂಮ್ ನಲ್ಲಿ ಕಾರ್ಯನಿರ್ವಹಿಸುವ ಕೂಲಿಕಾರರಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನೇಕಾರರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಈ ಸಂದರ್ಭ, ನೇಕಾರರ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಸಿ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ನೇಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ Occupancy certificate ನೀಡಲು ತೀರ್ಮಾನಿಸಲಾಗಿದೆ.

ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಕೆಯನ್ನು ‘ಗುಡಿ ಕೈಗಾರಿಕೆ’ ಎಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡುವ ಕುರಿತು ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ.

ಸರ್ಕಾರದ ನೇಕಾರ (ಕೈಮಗ್ಗ ಮತ್ತು ವಿದ್ಯುತ್ ಚಾಲಿತ) ನಿಗಮಗಳ ಉತ್ಪಾದನಾ ಸಾಮರ್ಥ್ಯದ ಅನುಗುಣವಾಗಿ ವಿದ್ಯಾವಿಕಾಸ ಯೋಜನೆಯಡಿ ಸಮವಸ್ತ್ರ ಪೂರೈಕೆ ಪ್ರಮಾಣ ನಿಗದಿಪಡಿಸಿ, ಉಳಿದ ಪ್ರಮಾಣಕ್ಕೆ ಟೆಂಡರ್ ಕರೆಯಲು ತೀರ್ಮಾನಿಸಲಾಗಿದೆ. ಇದಕ್ಕೆ ಡಿಸೆಂಬರ್ ತಿಂಗಳಿನಲ್ಲಿಯೇ ಕಾರ್ಯಾದೇಶ ನೀಡಿ, ಸಕಾಲದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ವಿವಿಧ ಇಲಾಖೆಗಳ ಸಮವಸ್ತ್ರದ ಅಗತ್ಯತೆಯ ಶೇ. 25ರಷ್ಟನ್ನು ಕೈಮಗ್ಗ ನಿಗಮದ ಮೂಲಕ ಖರೀದಿಸಲು ತೀರ್ಮಾನಿಸಲಾಯಿತು. ನೇಕಾರರಿಗೆ 2 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲು ತೀರ್ಮಾನಿಸಲಾಯಿತು. 5 ಎಚ್‍.ಪಿ. ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ತಮಿಳುನಾಡು ಮಾದರಿಯಲ್ಲಿ ಉಚಿತ ವಿದ್ಯುತ್ ಒದಗಿಸಲು ಹಾಗೂ Fixed charges ನಲ್ಲಿ ಶೇ. 50 ರಿಯಾಯಿತಿ ನೀಡಲು ತೀರ್ಮಾನಿಸಲಾಯಿತು.


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ