Breaking News

ನನ್ನ ವಿಚಾರಕ್ಕೆ ಬಂದರೆ ಸುಮ್ಮನಿರಲ್ಲ ಜಗದೀಶ್ ಶೆಟ್ಟರ್ ವಾರ್ನ್‌

Spread the love

ಹುಬ್ಬಳ್ಳಿ, ಡಿಸೆಂಬರ್‌, 18: ನಾನು ಯಾರ ಉಸಾಬರಿಗೂ ಹೋಗುವುದಿಲ್ಲ. ನನ್ನ ಬಗ್ಗೆ ಯಾರಾದರೂ ಕೆಣಕಿದರೆ ಸುಮ್ಮನೆ ಬಿಡುವದಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ವಾರ್ನಿಂಗ್ ಕೊಟ್ಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹುಟ್ಟು ಹಬ್ಬದ ನಿಮಿತ್ತ ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಗದೀಶ್ ತಮ್ಮ ವಿರೋಧಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಶೆಟ್ಟರ್ ಹೇಳಿಕೆಗೆ ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಜಗದೀಶ್ ಶೆಟ್ಟರ್‌ಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪಲಿದೆ ಎಂದು ಗುಸುಗಸು ಮಾತುಗಳು ಕೇಳಿಬರುತ್ತಿದ್ದವು. ಇದರ ಮಧ್ಯೆಯೇ ಶೆಟ್ಟರ್ ಗುಡುಗಿದ್ದು ಯಾರ ವಿರುದ್ಧ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.

ನನ್ನ ವಿಚಾರಕ್ಕೆ ಬಂದರೆ ಸುಮ್ಮನಿರಲ್ಲ

ಜಗದೀಶ್ ಶೆಟ್ಟರ್ ಸರಳ ಸಜ್ಜನ ರಾಜಕಾರಣಿ ಆಗಿದ್ದಾರೆ. ತಾನು ಆಯಿತು ತನ್ನ ಕೆಲಸ ಅಷ್ಟೇ ಎನ್ನುವ ಹಾಗೆ ಇದ್ದರು. ಆದರೆ ಇದೀಗ ನಾನು ಯಾರ ವಿಚಾರಕ್ಕೂ ಹೋಗುವುದಿಲ್ಲ.‌ ನನ್ನ ವಿಚಾರಕ್ಕೆ‌ ಯಾರೇ ಬಂದರೂ ಸುಮ್ಮನೆ ಬಿಡುವುದಿಲ್ಲ ಹೇಳಿಕೆ ನೀಡಿರುವುದು ಭಾರಿ ಸಂಚಲನ ಸೃಷ್ಟಿಸಿದೆ. ಇತ್ತೀಚೆಗೆ ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸಲಾಗುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿದ್ದವು. ಈಗಿರುವಾಗ ಶೆಟ್ಟರ್ ಹೇಳಿಕೆ ಮತ್ತೊಂದು ತಿರುವು ಪಡೆದುಕೊಂಡಿದೆ. ತುಂಬಿದ ಸಭೆಯಲ್ಲಿ ನನ್ನ ವಿಚಾರಕ್ಕೆ ಯಾರೇ ಬಂದರೂ ಸುಮ್ಮನೆ ಬಿಡುವುದಿಲ್ಲ ಎಂದು ಗುಡುಗಿದ್ದು ಯಾರ ವಿರುದ್ದ ಎನ್ನುವ ಚರ್ಚೆಗಳು ಶುರುವಾಗಿವೆ


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ