Breaking News

ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆ:ಸತೀಶ ಜಾರಕಿಹೊಳಿ

Spread the love

ಹೊನಗಾ, ಬೆನ್ನಾಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಅಶ್ವರೂಢ ಮೂರ್ತಿ ಲೋಕಾರ್ಪಣೆ

ಛತ್ರಪತಿ ಶಿವಾಜಿ ಮಹಾರಾಜರ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆಯಾಗಲಿ: ಶಾಸಕ ಸತೀಶ ಜಾರಕಿಹೊಳಿ

ಛತ್ರಪತಿ ಶಿವಾಜಿ ಮಹಾರಾಜರು ವಿಶ್ವ ಪ್ರಸಿದ್ದ ಪಡೆದ ಮಹಾನ್‌ ಹೋರಾಟಗಾರ, ಅವರ ಚಿಂತನೆ ತತ್ವಾದರ್ಶಗಳು ಇಂದಿನ ಯುವಕರಿಗೆ ಪ್ರೇರಣೆಯಾಗಲಿ ಎಂದು” ಕೆಪಿಸಿಸಿ ಕಾರ್ಯಾಧ್ಯಕ್ಷ , ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಹೊನಗಾ, ಬೆನ್ನಾಳಿ ಗ್ರಾಮದಲ್ಲಿ ಭಾನುವಾರ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜ ಅಶ್ವರೂಢ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ಅವರು ಮಾತನಾಡಿದರು.

ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಂದೇ ಜಾತಿಗೆ ಸೀಮಿತರಾಗಿರಲಿಲ್ಲ. ಎಲ್ಲಾ ಸಮುದಾಯದ ಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿಕೊಂಡು ಮುನ್ನಡೆಯುವ ಮಹಾನ್‌ ಮಹಾರಾಜರಾಗಿದ್ದರು ಎಂದು ಹೇಳಿದರು.

ಬೆಳಗಾವಿಯಲ್ಲಿ ಶಿವಾಜಿ ಮಹಾರಾಜರ ಪುತ್ಥಳಿ: ಜಿಲ್ಲೆಯಲ್ಲಿ ಅತೀ ದೊಡ್ಡ ಶಿವಾಜಿ ಮಹಾರಾಜರ ಪುತ್ಥಳಿ ಕಡೋಲಿಯಲ್ಲಿ ಇದೆ. ಬಳಿಕ ಯಮಕನಮರಡಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಶಿವಾಜಿ ಮಹಾರಾಜರ ಪುತ್ಥಳಿ ಇವೆ. ಆದರೆ, ಬೆಳಗಾವಿಯಲ್ಲಿ ಶಿವಾಜಿ ಮಹಾರಾಜರ ಬೃಹತ್‌ ಪುತ್ಥಳಿ ಪ್ರತಿಷ್ಠಾಪನಾ ಮಾಡಲು ಒಂದು ಕೋಟಿ ರೂ. ಅನುದಾನ ಇರಿಸಲಾಗಿದೆ. ಆದರೆ, ಸರ್ಕಾರದ ಇಚ್ಛಾಶಕ್ತಿ ಕೊರತೆ ಹಿನ್ನೆಲ್ಲೆಯಲ್ಲಿ ಕಾರ್ಯರೂಪಕ್ಕೆ ಬರುತ್ತಿಲ್ಲ. ಮುಂದಿನ ದಿನಗಳಲ್ಲಿ ಈ ಮಹತ್ವದ ಕಾರ್ಯ ನೇರವೇರಲಿದೆ ಎಂದು ಭರವಸೆ ನೀಡಿದರು.

ಮಹಾನ್ ನಾಯಕರ ಹೋರಾಟದ ಅಧ್ಯಯನ ಅಗತ್ಯ: ಛತ್ರಪತಿ ಶಿವಾಜಿ ಮಹಾರಾಜರು ವಿಶ್ವಕ್ಕೆ ಮಾದರಿ, ಮಹಾನ್ ನಾಯಕರ ಹೋರಾಟದ ಇತಿಹಾಸ ಬಗ್ಗೆ ಬಹಳಷ್ಟು ಅಧ್ಯಯನ ಮಾಡಬೇಕು. ಇತಿಹಾಸವನ್ನು ಎಲ್ಲಾರಿಗೂ ತಿಳಿಸಿದಾಗ ಮಾತ್ರ ಮಹಾನ್ ನಾಯಕರ ಹೋರಾಟಕ್ಕೆ ಫಲ ಸಿಕ್ಕಂತಾಗುತ್ತದೆ. ಇಂದಿನ ಯುವಕರಿಗೆ ಇದು ಪ್ರೇರಣೆಯಾಗಲಿ. ಶಿವಛತ್ರಪತಿ ಸ್ಮಾರಕ ಪ್ರತಿಷ್ಠಾನ ಸೇವಾ ಸಂಘಟಕರು ಹಾಗೂ ಗ್ರಾಮಸ್ಥರ ಬಹುದಿನಗಳ ಕನಸು ಇಂದು ನನಸಾಗಿದೆ. ಈ ಕಾರ್ಯಕ್ರಮ ಯಶಸ್ವಿಗೆ ನಿಮ್ಮೇಲ್ಲರ ಒಗ್ಗಟವೇ ಕಾರಣ ಎಂದು ಸಂತಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ