ಶಿಗ್ಗಾವಿ: ಪ್ರಸಕ್ತ ಸಾಲಿನ ಆಯವ್ಯಯವನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸುತ್ತಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಫೆಬ್ರವರಿ ತಿಂಗಳಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆ ಈಗಾಗಲೇ ಎರಡು ಬಾರಿ ಹಣಕಾಸಿನ ಇಲಾಖೆಯೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದರು.
ಅಧಿವೇಶನ ಮುಗಿದ ಬಳಿಕ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಹೇಳಿದರು.
Laxmi News 24×7