ಬೆಳಗಾವಿ: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಜಿ. ಹಿರೇಮಠ ಅವರನ್ನು ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗಾವಿ ಜಿಲ್ಲಾಧಿಕಾರಿಗಳಾಗಿದ್ದ ಎಂಜಿ ಹಿರೇಮಠ ಅವರನ್ನು ಕೆ.ಆರ್.ಐ.ಡಿ.ಎಲ್.
ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಈಗ ಮತ್ತೆ ತವರು ಜಿಲ್ಲೆಗೆ ಪ್ರಾದೇಶಿಕ ಆಯುಕ್ತರನ್ನಾಗಿ ನಿಯುಕ್ತಿಯಾಗಿದ್ದಾರೆ.
ಮೂಲತಃ ಬೈಲಹೊಂಗಲ ತಾಲೂಕಿನ ಗಣಿಕೊಪ್ಪ ಗ್ರಾಮದವರಾದ ಎಂ.ಜಿ. ಹಿರೇಮಠ ಅವರು ಸುಮಾರು ಎರಡು ವರ್ಷಗಳ ಕಾಲ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.
Laxmi News 24×7