Home / ರಾಜಕೀಯ / ಕೃಷಿ ಯಂತ್ರಧಾರೆ ಯೋಜನೆ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ

ಕೃಷಿ ಯಂತ್ರಧಾರೆ ಯೋಜನೆ ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ

Spread the love

ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಲವೆಡೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ.

2015-16ನೇ ಸಾಲಿನಲ್ಲಿ ಸ್ಥಾಪಿಸಿರುವ ಕೆಲವು ಕೃಷಿ ಯಂತ್ರಧಾರೆ ಕೇಂದ್ರಗಳ ಆರು ವರ್ಷಗಳ ಒಡಂಬಡಿಕೆ ಅವಧಿಯು ಮುಕ್ತಾಯವಾಗಿದೆ ಎಂದರು.

ಸಂಬಂಧಪಟ್ಟ ಸೇವಾ ದರ ಸಂಸ್ಥೆಗಳು ಸದರಿ ಕೇಂದ್ರಗಳನ್ನು ಮುಂದುವರೆಸಲು ಇಚ್ಚೆಪಡದ ಹಿನ್ನಲೆಯಲ್ಲಿ ಅಂತಹ ಕೇಂದ್ರಗಳನ್ನು ಇತರೆ ಆಸಕ್ತಿಯುಳ್ಳ ಸೇವಾ ದರ ಸಂಸ್ಥೆಗಳಿಗೆ ಅಥವಾ ಆದ್ಯತೆ ಮೇರೆಗೆ ರೈತ ಉತ್ಪಾದಕ ಸಂಸ್ಥೆಗಳಿಗೆ ಹಸ್ತಾಂತರಿಸಲು ಸರ್ಕಾರಿ ಆದೇಶವನ್ನು ನೀಡಲಾಗಿದ್ದು, ಅದರನ್ವಯ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವರು ಉತ್ತರಿಸಿದ್ದಾರೆ.

ಬೆಳೆಗಳಿಗೆ ಬಾಧಿಸುವ ಕೀಟ ರೋಗ, ಕಳೆ ನಿರ್ವಹಣೆಗೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಪೀಡೆನಾಶಕಗಳನ್ನು ಶೇ.50ರ ಸಹಾಯಧನದಡಿ ಪ್ರತಿ ಹೆಕ್ಟೇರಿಗೆ 500 ರೂ.ಮೀರದಂತೆ ಪ್ರತಿ ರೈತರಿಗೆ ಪ್ರತಿ ಹಂಗಾಮಿಗೆ ಗರಿಷ್ಟ 2 ಹೆಕ್ಟೇರಿಗೆ ಸೀಮಿತಗೊಳಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನೀಕರಿಸಿ ವಿತರಿಸಲಾಗುತ್ತಿದೆ ಎಂದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ