ವಚನ ಭ್ರಷ್ಟಾರಾದರೆ ಕುಮಾರಸ್ವಾಮಿ ಅವರಿಗಾದ ಗತಿ ನಿಮಗೂ ಆಗುತ್ತೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರ ನಗರದಲ್ಲಿ ಮಾತನಾಡಿ 29 ರಂದು ಮೀಸಲಾತಿ ನೀಡೋದಾಗಿ ಸಿಎಂ ಭರವಸೆ ನೀಡಿದ್ದಾರೆ. ಮೀಸಲಾತಿ ಘೋಷಣೆ ಆಗುವ ಭರವಸೆ ಇದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. 2ಎ ಸಮಾನವಾದ ಮೀಸಲಾತಿ ಸಿಗುತ್ತದೆ. ತಾಯಿ ಆಣೆ ಮಾಡಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಪಂಚಮಸಾಲಿ 2ಎ ಮೀಸಲಾತಿ ನೀಡುವುದಾಗಿ ತಾಯಿ ಆಣೆ ಮಾಡಿದ್ದಾರೆ ಎಂದರು. ತಾಯಿ ಆಣೆ ಮಾಡಿದ್ಮೇಲೆ ಕೊಡಲಿಲ್ಲ ಅಂದ್ರೇ ಏನು ಆಗುತ್ತದೆ ನೋಡಿ ಆಣೆ ಮಾಡಿದ್ಮೇಲೂ ಎಚ್‌ಡಿ ಕುಮಾರಸ್ವಾಮಿ ಬಿಜೆಪಿಗೆ ಅಧಿಕಾರ ನೀಡಲಿಲ್ಲ.
ಅದಕ್ಕಾಗಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ ವಚನ ಭ್ರಷ್ಟತೆ ಇರುತ್ತದೆ, ಅದಕ್ಕಾಗಿ ಸಿಎಂ ಭರವಸೆ ಈಡೇರಿಸುತ್ತಾರೆ ಎಂದು ಹೇಳಿದರು ಬೇರೆ ಸಮಾಜದವರು ಮೀಸಲಾತಿ ಹಕ್ಕು ಕೇಳುವ ಬಗ್ಗೆ ನಮ್ಮ ಅಭ್ಯಂತರವಿಲ್ಲ. ಸರ್ಕಾರ ಎಲ್ಲವನ್ನೂ ಪರಿಶೀಲಿಸಿ ನಮಗೆ ಮೀಸಲಾತಿ ನೀಡುವ ವಿಶ್ವಾಸವಿದೆ ಎಂದರು.