Breaking News
Home / ರಾಜಕೀಯ / ಹುಬ್ಬಳ್ಳಿ ಜಯದೇವ ಆಸ್ಪತ್ರೆ’: ಜ.12ಕ್ಕೆ ಪ್ರಧಾನಿಯಿಂದ ಶಂಕುಸ್ಥಾಪನೆ ಸಾಧ್ಯತೆ

ಹುಬ್ಬಳ್ಳಿ ಜಯದೇವ ಆಸ್ಪತ್ರೆ’: ಜ.12ಕ್ಕೆ ಪ್ರಧಾನಿಯಿಂದ ಶಂಕುಸ್ಥಾಪನೆ ಸಾಧ್ಯತೆ

Spread the love

ಬೆಂಗಳೂರು: ಕಿತ್ತೂರು ಕರ್ನಾಟಕ ಭಾಗದ ಬಹುನಿರೀಕ್ಷಿತ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣಕ್ಕೆ ಕೊನೆಗೂ ಕಾಲ ಕೂಡಿ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು 2023ರ ಜ.12ಕ್ಕೆ ಶಂಕು ಸ್ಥಾಪನೆ ನೆರವೇರಿಸುವ ಸಾಧ್ಯತೆಯಿದೆ.

 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನಸಿನ ಕೂಸಾಗಿರುವ ಹುಬ್ಬಳ್ಳಿ ಜಯದೇವ ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಸಿದ್ಧತೆಗಳು ಭರದಿಂದ ಸಾಗಿದ್ದು 2022-23ರ ರಾಜ್ಯ ಬಜೆಟ್‌ನಲ್ಲಿ 250 ಕೋಟಿ ರೂ. ಘೋಷಿಸಲಾಗಿತ್ತು.

ಈ ಹಿಂದೆಯೇ ಹಲವು ಬಾರಿ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆಗೆ ಸರ್ಕಾರ ಮುಂದಾಗಿದ್ದರೂ, ಕೆಲ ಆಡಳಿತಾತ್ಮಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ಇದೀಗ ಅಂತಿಮವಾಗಿ ಪ್ರಧಾನಿ ಮೋದಿ ಜನವರಿಯಲ್ಲಿ ರಾಜ್ಯಕ್ಕೆ ಆಗಮಿಸಿ ಹಲವು ಯೋಜನೆಗಳಿಗೆ ಚಾಲನೆ ನೀಡಲು ಸಮಯ ನಿಗದಿಪಡಿಸಲಾಗಿದ್ದು, ಅವುಗಳ ಪೈಕಿ ಹುಬ್ಬಳ್ಳಿ ಜಯದೇವ ಆಸ್ಪತ್ರೆ ಶಂಕುಸ್ಥಾಪನಾ ಕಾರ್ಯಕ್ರಮವೂ ಸೇರಿದೆ ಎಂದು ಜಯದೇವ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ‘ಉದಯವಾಣಿ’ಗೆ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ಪ್ರಾರಂಭವಾಗುವುದರಿಂದ ಉತ್ತರ ಕರ್ನಾಟಕದ ಲಕ್ಷಾಂತರ ಮಂದಿಗೆ ನೆರವಾಗಲಿದೆ. ಹೃದ್ರೋಗ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದ ತಜ್ಞ ವೈದ್ಯರು, ಸುಸಜ್ಜಿತ ಸೌಲಭ್ಯಗಳು ಇರಲಿವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬಾಡಿ ಬಿಲ್ಡ್ ಮಾಡಿ ಯುವತಿಯರ ಮುಂದೆ ಪ್ರದರ್ಶಿಸುತ್ತಿದ್ದ ಯುವಕನಿಗೆ ಪೊಲೀಸರ ವರ್ಕೌಟ್

Spread the loveಬೆಳಗಾವಿ: ಜಿಮ್ ಹೋಗೋದು, ವ್ಯಾಯಾಮ, ಕಸರತ್ತು ಮಾಡಿ ದೇಹವನ್ನು ಸಾಮು ಮಾಡಿಕೊಳ್ಳುವುದು ತಪ್ಪಲ್ಲ. ಅದರೆ ನಾನು ದೇಹವನ್ನು ಸಾಮು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ