Breaking News

ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ತಾರತಮ್ಯ ಖಂಡಿಸಿ ಪ್ರತಿಭಟನೆ

Spread the love

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಹಾಗೂ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಉತ್ತರ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಒಂದು ದಿನದ ಸಾಂಕೇತಿಕ ಧರಣಿಯನ್ನು ನಗರದ ಮಿನಿ ವಿಧಾನಸೌಧ ಬಳಿ ನಡೆಸಿತು.

ಈ ವೇಳೆ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಿದ ಸರ್ಕಾರಕ್ಕೆ ಧಿಕ್ಕಾರ, ಮಹಾದಾಯಿ ವಿಷಯದಲ್ಲಿ ತಾರತಮ್ಯವೆಸಗಿದ ಸರ್ಕಾರಕ್ಕೆ ಧಿಕ್ಕಾರ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸಮಿತಿಯ ಸದಸ್ಯ ಈರಪ್ಪ ಎಮ್ಮಿ ಮಾತನಾಡಿ, ಉತ್ತರ ಕರ್ನಾಟಕದ ಭಾಗದಲ್ಲಿ ಮೊದಲಿನಿಂದಲೂ ಸರ್ಕಾರ ಮಹಾದಾಯಿ ವಿಷಯದಲ್ಲಿ ತಾರತಮ್ಯ ಮಾಡಿದೆ. ಅಲ್ಲದೆ ಶೈಕ್ಷಣಿಕ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿರ್ಲಕ್ಷ್ಯ ವಹಿಸುವ ಮೂಲಕ ಉತ್ತರ ಕರ್ನಾಟಕದ ಜನತೆ ಅನ್ಯಾಯ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಬೇಕು. ಈ ಹಿನ್ನಲೆಯಲ್ಲಿ ಹೋರಾಟ ಹಮ್ಮಿಕೊಂಡಿದ್ದು ಉ.ಕ ಭಾಗಕ್ಕೆ ಹೆಚ್ಚಿನ ಸೌಲಭ್ಯವನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ನಮ್ಮ ಹೋರಾಟ ಸಮಿತಿಯ ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡುವ ಮೂಲಕ ಪ್ರತ್ಯೇಕ ಉತ್ತರ ಕಲ್ಯಾಣ ಕರ್ನಾಟಕಕ್ಕೆ ನಾವು ಮುಂದಾಗುತ್ತೇವೆ ಎಂದು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ