ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ಅನುದಾನಿತ ಶಾಲಾ ಕಾಲೇಜುಗಳಲ್ಲಿ 2006 ರ ನಂತರ ನೇಮಕ ಹೊಂದಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ನೌಕರರಿಗೆ ನಿಶ್ಚಿತ ಪಿಂಚಣಿ ಸೌಲಭ್ಯ. ಸರ್ಕಾರಿ ನೌಕರರಿಗೆ ನೀಡುತ್ತಿರುವ ಜ್ಯೋತಿ ಸಂಜೀವಿನಿ ಮತ್ತಿತರ ವೈದ್ಯಕೀಯ ಸೌಲಭ್ಯಗಳನ್ನು ತಾರತಮ್ಯವಿಲ್ಲದೆ ಅನುದಾನಿತ ನೌಕರರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಜಿ.ಹನುಮಂತಪ್ಪ, ಮುತ್ತುರಾಜ ಎಮ್.ಎಮ್., ಎಸ್.ಎಮ್.ಮಾಮೂಲದಾರ, ಎಸ್.ಎಲ್.ಜಾಧವ, ಸೋಮಣ್ಣ ಮುಡೆನ್ನನವರ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Laxmi News 24×7