Home / ರಾಜಕೀಯ / ಅಕ್ಷರದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರ ಪ್ರತಿಭಟನೆ

ಅಕ್ಷರದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರ ಪ್ರತಿಭಟನೆ

Spread the love

ಅಕ್ಷರದಾಸೋಹ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ತಯಾರಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಸದಸ್ಯರು ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಬಿಸಿಯೂಟ ತಯಾರಕರಿಗೆ 2023-24 ನೇ ಬಜೆಟನಲ್ಲಿ ಕನಿಷ್ಟ ವೇತನ 31 ಸಾವಿರ ರೂ. ಮಾಸಿಕ ವೇತನ. ಬಿಸಿಯೂಟ ತಯಾರಕರಿಗೆ ಸೇವೆ ಸಲ್ಲಿಸಿ ನಿವೃತ್ತಿಯಾದವರಿಗೆ ಮತ್ತು ನಿವೃತ್ತಿ ಅಂಚಿನಲ್ಲಿರುವವರಿಗೆ ಇಡಿಗಂಟು 1.50 ಲಕ್ಷ ರೂ ಮತ್ತು ಮಾಸಿಕ ಪಿಂಚಣಿ 5 ಸಾವಿರ ರೂ. ಕೂಡಲೇ ಜಾರಿಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.ಹೊನಪ್ಪ ಮರೆಮ್ಮನವರ, ಅವರಗೇರಿ ಚಂದ್ರು, ರುದ್ರಮ್ಮ ಬೆಳಲಗೇರಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಬಿಸಿಯೂಟ ಸಿಬ್ಬಂದಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ