Breaking News

ವಿಧಾನಸಭೆಯಲ್ಲಿ `SC-ST’ ಮೀಸಲಾತಿ ಹೆಚ್ಚಳ ಮಸೂದೆ ಪಾಸ್

Spread the love

ಬೆಳಗಾವಿ : ಪರಿಶಿಷ್ಟ ಜಾತಿ (SC) ಮತ್ತು ಪಂಗಡದ (ST) ವರ್ಗಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಹೆಚ್ಚಿಸುವ ಮಸೂದೆಗೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ನೀಡಿದೆ. ಈ ಮೂಲಕ ಎಸ್ ಸಿ ಗೆ ಪ್ರಸ್ತುತ ಶೇ. 15 ರಷ್ಟು ಇದ್ದ ಮೀಸಲು 17 ಕ್ಕೆ ಹಾಗೂ ಎಸ್ ಟಿ ಗೆ ಇದ್ದ ಶೇ.

3 ರಷ್ಟು ಮೀಸಲು ಶೇ. 7 ಕ್ಕೆ ಹೆಚ್ಚಾಗಲಿದೆ.

 

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಧೇಯಕ-2022 ನ್ನು ಸರ್ಕಾರ ಮಂಡಿಸಿತ್ತು. ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ವಿಧೇಯಕ ಕುರಿತು ವಿವರಣೆ ನೀಡಿದರು. ಬಳಿಕ ಧ್ವನಿಮತದಿಂದ ಅಂಗೀಕರಿಸಲಾಗಿದೆ.

ಇದೀಗ ರಾಜ್ಯ ಸರ್ಕಾರವು ಮಸೂದೆಯನ್ನು ಕೇಂದ್ರಕ್ಕೆ ಕಳುಹಿಸಿಕೊಟ್ಟು ಶೆಡ್ಯೂಲ್-9ಕ್ಕೆ ಸೇರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಿದೆ. ಸಂಸತ್ ನಲ್ಲಿ ಇದು ಅಂಗೀಕಾರವಾದ ಬಳಿಕ ಅಧಿಕೃತವಾಗಿ ಕಾನೂನಾಗಿ ರಾಜ್ಯದಲ್ಲಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಅಂಗೀಕಾರವಾದ ಬಳಿಕ ತರ ವಿಧಾನ ಪರಿಷತ್ ನಲ್ಲಿ ವಿಧೇಯಕ ಮಂಡಿಸಲಾಗುತ್ತಿದೆ. ನಾಗಮೋಹನ್ ದಾಸ್ ಅವರು ನೀಡಿದ್ದ ವರದಿಯಂತೆ ರಾಜ್ಯ ಸರ್ಕಾರ ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳವನ್ನು ಮಾಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ