Breaking News
Home / ಹುಬ್ಬಳ್ಳಿ / ಮುಂಬಯಿಯಲ್ಲಿ ಎಷ್ಟು ಮರಾಠಿ ಭಾಷಿಕರಿದ್ದಾರೆಂದು ಠಾಕ್ರೆ ನೋಡಲಿ: ಅಶ್ವಥ ನಾರಾಯಣ ತಿರುಗೇಟು

ಮುಂಬಯಿಯಲ್ಲಿ ಎಷ್ಟು ಮರಾಠಿ ಭಾಷಿಕರಿದ್ದಾರೆಂದು ಠಾಕ್ರೆ ನೋಡಲಿ: ಅಶ್ವಥ ನಾರಾಯಣ ತಿರುಗೇಟು

Spread the love

ಹುಬ್ಬಳ್ಳಿ: ರಾಜ್ಯದ ಕೆಲವು ಪ್ರದೇಶಗಳನ್ನು‌ ಕೇಂದ್ರಾಡಳಿತ ಮಾಡಬೇಕೆಂದು ಹೇಳಿಕೆ‌ ನೀಡಿದ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆಗೆ ಮುಂಬಯಿಯಲ್ಲಿ ಮರಾಠಿ ಭಾಷಿಕರು ಎಷ್ಟು ಸಂಖ್ಯೆಯಲ್ಲಿದ್ದಾರೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ.

ಇದನ್ನು ನಾವು ಪ್ರಶ್ನಿಸಿದರೆ ಅವರಿಗೇ ಸಮಸ್ಯೆಯಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಕೆ. ಅಶ್ವತ್ಥನಾರಾಯಣ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿವಿವಾದ ಮುಗಿದ ಅಧ್ಯಾಯ. ಆಗಾಗ ಈ ವಿಚಾರ ತೆಗೆಯುತ್ತ ಅವರಿಗೂ, ಜನರಿಗೂ ಸಮಸ್ಯೆ ತಂದಿಡುತ್ತಿದ್ದಾರೆ. ಜನರ ಬಗ್ಗೆ ಕಾಳಜಿಯಿಲ್ಲದ‌ ಅವರು ರಾಜಕೀಯ ಹಾಗೂ‌ ಸ್ವಾರ್ಥಕ್ಕಾಗಿ‌ ಹೀಗೆ ಮಾಡುತ್ತಿದ್ದಾರೆ. ಇಂತಹ ನಾಯಕರು ಸಮಾಜಕ್ಕೆ ಸಮಸ್ಯೆ‌ ಹಾಗೂ ಭಾರ. ಬೆಳಗಾವಿ, ನಿಪ್ಪಾಣಿ, ಕಾರವಾರ ಕೇಂದ್ರಾಡಳಿತ ಪ್ರದೇಶವಾಗಬೇಕೆಂಬ ಆಲೋಚನೆ ಅವರಿಗೆ ಹೇಗೆ ಬಂತು ತಿಳಿಯುತ್ತಿಲ್ಲ ಎಂದರು.

ಕೋವಿಡ್ ನೆಪದಲ್ಲಿ ಅವಧಿಪೂರ್ವ‌ ಚುನಾವಣೆ ನಡೆಸಲು‌ ಬಿಜೆಪಿ ಮುಂದಾಗಿದೆ ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವರು, ಅವರಿಗೆ ತಿಳಿವಳಿಕೆ‌ ಕೊರತೆ ಇದೆ. ಹಲವಾರು ಜವಾಬ್ದಾರಿ ನಿರ್ವಹಿಸಿರುವ ಅವರು, ವಿಶ್ವದಾದ್ಯಂತ ಏನಾಗುತ್ತಿದೆ ಎನ್ನುವುದು ತಿಳಿದಿಲ್ಲವೇ? ಅವರಿಗೆ ರಾಜಕೀಯ ಮತ್ತು ಚುನಾವಣೆ ಬಿಟ್ಟರೆ, ಜನರ ಸಮಸ್ಯೆ ಹಾಗೂ ಆರೋಗ್ಯದ ಚಿಂತನೆಯಿಲ್ಲ. ಅಧಿಕಾರ ಕಳೆದುಕೊಂಡ ಅವರಿಗೆ ಬಹಳ ಸಂಕಟವಾಗುತ್ತಿದೆ. ಇದೀಗ ಅದರ ಹಪಾಹಪಿ, ಹಸಿವು ಹೆಚ್ಚಿರುವುದರಿಂದ‌ ಹೀಗೆಲ್ಲ ಹೇಳಿಕೆ ನೀಡುತ್ತಿದ್ದಾರೆ ಎಂದು ಹೀಯಾಳಿಸಿದರು.


Spread the love

About Laxminews 24x7

Check Also

ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Spread the love ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದೇ ಚುರುಕುತನದಿಂದ ಹಾಗೂ ಪ್ರಾಮಾಣಿಕತೆಯಿಂದ ಕೆಲಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ