Breaking News

ಚುನಾವಣೆ ಸಮೀಪದ ಬೆನ್ನಲ್ಲೇ ವಿದ್ಯುತ್ ದರ ಇಳಿಕೆ ಮಾಡಿ ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಮತದಾರರನ್ನು ಸೆಳೆಯಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದ್ದು, ಹಲವಾರು ಜನಪರ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ.

ಇದರ ನಡುವೆ ರಾಜ್ಯ ಸರ್ಕಾರ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೆಸ್ಕಾಂ, ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಇಳಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

 

ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನಿಲ್ ಕುಮಾರ್ ಬೆಸ್ಕಾಂ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗದುಕೊಳ್ಳಲಾಗಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 37 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 39 ಪೈಸೆ ಕಡಿತ ಮಾಡಲಾಗಿದ್ದು, ಇದರ ಪ್ರಯೋಜನ ನೇರವಾಗಿ ಗ್ರಾಹಕರಿಗೆ ಲಭಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ. ವಿದ್ಯುತ್ ದರ ಏರಿಕೆ ಮಾಡಿದ ಹಿನ್ನೆಲೆ ಸರ್ಕಾರದ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದರು. ಇದೀಗ ಸರ್ಕಾರ ಜನರಿಗೆ ನೆಮ್ಮದಿ ಸುದ್ದಿ ನೀಡಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ