Breaking News

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ವಿಧೇಯಕಗಳನ್ನು ಮಂಡಿಸಲಾಗಿದ್ದು, ಒಂಬತ್ತು ವಿಧೇಯಕಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು ಒಂಬತ್ತು ದಿನಗಳ ಅಧಿವೇಶನದಲ್ಲಿ ಸುಮಾರು 41 ಗಂಟೆ 20 ನಿಮಿಷಗಳ ಕಾಲ ಕಲಾಪ ನಡೆದಿದೆ ಎಂದರು. ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿತಂದಿಲ್ಲ. ಒಟ್ಟು ಪ್ರತಿಶತ 75 ರಷ್ಟು ಹಾಜರಾತಿ ಇತ್ತು. ಇದು ಸರಿಯಾದ ಬೆಳವಣಿಗೆ ಅಲ್ಲ. ದಿನೇಶ ಗುಂಡೂರಾವ್ ಹರೀಶ್ ಪೂಂಜಾ, ಕೃಷ್ಣಪ್ಪ, ಜಮೀರ ಅಹ್ಮದ್ ಹಾಗೂ ಅನಿತಾ ಕುಮಾರಸ್ವಾಮಿ ಸೇರಿದಂತೆ ಒಂಬತ್ತು ಶಾಸಕರು ಅನುಮತಿ ಪಡೆಯದೆ ಸದನಕ್ಕೆ ಗೈರಾಗಿದ್ದರು ಎಂದು ಕಾಗೇರಿ ಹೇಳಿದರು. ಕಲಾಪದಲ್ಲಿ ಒಟ್ಟು 2125 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು ಸದನದಲ್ಲಿ ಉತ್ತರಿಸಬೇಕಿದ್ದ 150 ಪ್ರಶ್ನೆಗಳ ಪೈಕಿ 146 ಪ್ರಶ್ನೆಗಳಿಗೆ ಮತ್ತು ಲಿಖಿತ ಮೂಲಕ ಉತ್ತರಿಸುವ 1923 ಪ್ರಶ್ನೆಗಳ ಪೈಕಿ 1614 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನಸೆಳೆಯುವ 289 ಸೂಚನೆಗಳ ಪೈಕಿ 85 ಸೂಚನೆಗಳನ್ನು ಚರ್ಚಿಸಲಾಗಿದೆ ಎಂದು ಹೇಳಿದರು. ಮಹಾರಾಷ್ಟ್ರದ ಜನತೆಯು ಅನಾವಶ್ಯಕವಾಗಿ ಸೃಷ್ಟಿಸಿರುವ ಗಡಿ ವಿವಾದವನ್ನು ಖಂಡಿಸಿ ರಾಜ್ಯದ ಹಿತರಕ್ಷಣೆ ಗೆ ಕಟಿಬದ್ಧರಾಗಿರುವದಾಗಿ ಸದನವು ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ ಎಂದರು. ಮುಖ್ಯವಾಗಿ ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಚರ್ಚೆಯಾಗಬೇಕಿತ್ತು. ಇದು ಎಲ್ಲರ ನಿರೀಕ್ಷೆ. ಹೆಚ್ಚಿನ ಕಾಲಾವಕಾಶ ಸಿಗದಿದ್ದರೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ನಡೆಸಲಾಗಿದೆ. ಮುಂದಿನ ಅಧಿವೇಶನದಲ್ಲಿ ಮೊದಲ ವಾರದ ಕಲಾಪದಲ್ಲೇ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಹೇಳಿದರು. ಈ ಬಾರಿಯ ಅಧಿವೇಶನ ದಾಖಲೆಯ ವೀಕ್ಷಕರ ಸಂಖ್ಯೆಗೆ ಸಾಕ್ಷಿಯಾಗಿದೆ. ಬೆಂಗಳೂರಿನಲ್ಲಿ ನಡೆದ ಅಧಿವೇಶನವನ್ನು 15000 ಜನರು ವೀಕ್ಷಿಸಿದ್ದರು. ಆದರೆ ಬೆಳಗಾವಿ ಅಧಿವೇಶನವನ್ನು 20 ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಇದೊಂದು ದಾಖಲೆಯಾಗಿದೆ ಎಂದು ಕಾಗೇರಿ ಅವರು ಹೇಳಿದರು.

Spread the love

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 12 ವಿಧೇಯಕಗಳನ್ನು ಮಂಡಿಸಲಾಗಿದ್ದು, ಒಂಬತ್ತು ವಿಧೇಯಕಗಳನ್ನು ಅಂಗೀಕರಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಟ್ಟು ಒಂಬತ್ತು ದಿನಗಳ ಅಧಿವೇಶನದಲ್ಲಿ ಸುಮಾರು 41 ಗಂಟೆ 20 ನಿಮಿಷಗಳ ಕಾಲ ಕಲಾಪ ನಡೆದಿದೆ ಎಂದರು.

 

ಅಧಿವೇಶನದಲ್ಲಿ ಶಾಸಕರ ಹಾಜರಾತಿ ತೃಪ್ತಿತಂದಿಲ್ಲ. ಒಟ್ಟು ಪ್ರತಿಶತ 75 ರಷ್ಟು ಹಾಜರಾತಿ ಇತ್ತು. ಇದು ಸರಿಯಾದ ಬೆಳವಣಿಗೆ ಅಲ್ಲ. ದಿನೇಶ ಗುಂಡೂರಾವ್ ಹರೀಶ್ ಪೂಂಜಾ, ಕೃಷ್ಣಪ್ಪ, ಜಮೀರ ಅಹ್ಮದ್ ಹಾಗೂ ಅನಿತಾ ಕುಮಾರಸ್ವಾಮಿ ಸೇರಿದಂತೆ ಒಂಬತ್ತು ಶಾಸಕರು ಅನುಮತಿ ಪಡೆಯದೆ ಸದನಕ್ಕೆ ಗೈರಾಗಿದ್ದರು ಎಂದು ಕಾಗೇರಿ ಹೇಳಿದರು.

ಕಲಾಪದಲ್ಲಿ ಒಟ್ಟು 2125 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು ಸದನದಲ್ಲಿ ಉತ್ತರಿಸಬೇಕಿದ್ದ 150 ಪ್ರಶ್ನೆಗಳ ಪೈಕಿ 146 ಪ್ರಶ್ನೆಗಳಿಗೆ ಮತ್ತು ಲಿಖಿತ ಮೂಲಕ ಉತ್ತರಿಸುವ 1923 ಪ್ರಶ್ನೆಗಳ ಪೈಕಿ 1614 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನಸೆಳೆಯುವ 289 ಸೂಚನೆಗಳ ಪೈಕಿ 85 ಸೂಚನೆಗಳನ್ನು ಚರ್ಚಿಸಲಾಗಿದೆ ಎಂದು ಹೇಳಿದರು.

ಮಹಾರಾಷ್ಟ್ರದ ಜನತೆಯು ಅನಾವಶ್ಯಕವಾಗಿ ಸೃಷ್ಟಿಸಿರುವ ಗಡಿ ವಿವಾದವನ್ನು ಖಂಡಿಸಿ ರಾಜ್ಯದ ಹಿತರಕ್ಷಣೆ ಗೆ ಕಟಿಬದ್ಧರಾಗಿರುವದಾಗಿ ಸದನವು ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ ಎಂದರು.

ಮುಖ್ಯವಾಗಿ ಸದನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚಿನ ಚರ್ಚೆಯಾಗಬೇಕಿತ್ತು. ಇದು ಎಲ್ಲರ ನಿರೀಕ್ಷೆ. ಹೆಚ್ಚಿನ ಕಾಲಾವಕಾಶ ಸಿಗದಿದ್ದರೂ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ವಿಶೇಷ ಚರ್ಚೆ ನಡೆಸಲಾಗಿದೆ. ಮುಂದಿನ ಅಧಿವೇಶನದಲ್ಲಿ ಮೊದಲ ವಾರದ ಕಲಾಪದಲ್ಲೇ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಕುರಿತು ಚರ್ಚೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಹೇಳಿದರು.

ಈ ಬಾರಿಯ ಅಧಿವೇಶನ ದಾಖಲೆಯ ವೀಕ್ಷಕರ ಸಂಖ್ಯೆಗೆ ಸಾಕ್ಷಿಯಾಗಿದೆ. ಬೆಂಗಳೂರಿನಲ್ಲಿ ನಡೆದ ಅಧಿವೇಶನವನ್ನು 15000 ಜನರು ವೀಕ್ಷಿಸಿದ್ದರು. ಆದರೆ ಬೆಳಗಾವಿ ಅಧಿವೇಶನವನ್ನು 20 ಸಾವಿರಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಇದೊಂದು ದಾಖಲೆಯಾಗಿದೆ ಎಂದು ಕಾಗೇರಿ ಅವರು ಹೇಳಿದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ