Breaking News

ಕಳಸಾ-ಬಂಡೂರಿ ಕನಸು ಕೊನೆಗೂ ನನಸು!

Spread the love

ವದೆಹಲಿ: ಮಹದಾಯಿ ನದಿಯಿಂದ ಮಲಪ್ರಭಾ ನದಿಗೆ ನೀರು ತಿರುಗಿಸುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಕಳಸಾ-ಬಂಡೂರಿ ಕಾಲುವೆ ನಿರ್ಮಾಣ ಯೋಜನೆಗೆ ಕೇಂದ್ರ ಜಲಶಕ್ತಿ ಸಚಿವಾಲಯ ಕೊನೆಗೂ ಅನುಮೋದನೆ ನೀಡಿದೆ. ಈ ಮೂಲಕ ಕಳೆದೊಂದು ದಶಕದಿಂದ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಕಳಸಾ-ಬಂಡೂರಿ ಯೋಜನೆ ಜಾರಿಯಾಗುವುದು ಖಚಿತವಾಗಿದೆ.

ಕೇಂದ್ರ ಜಲ ಆಯೋಗವು ರಾಜ್ಯದ ಪರಿಷ್ಕೃತ ಸಮಗ್ರ ಯೋಜನಾ ವರದಿ(ಡಿಪಿಆರ್)ಗೆ ಒಪ್ಪಿಗೆ ಸೂಚಿಸಿರುವುದರನ್ನು ಪರಿಗಣಿಸಿದ ಜಲಶಕ್ತಿ ಸಚಿವಾಲಯ, ಅನುಮತಿ ನೀಡಿರುವ ನೋಟಿಫಿಕೇಷನ್ ಹೊರಡಿಸಿದೆ. ರಾಜ್ಯ ಸರ್ಕಾರದ ಅನುದಾನದಲ್ಲೇ ಯೋಜನೆ ಅನುಷ್ಠಾನವಾಗುತ್ತಿರುವುದರಿಂದ ಕೇಂದ್ರ ಸಚಿವ ಸಂಪುಟದ ಅನುಮೋದನೆ ಬೇಕಿಲ್ಲ ಎಂದು ಮೂಲಗಳು ಖಚಿತಪಡಿಸಿವೆ.

ಗೋವಾ ಸರ್ಕಾರದ ವಿರೋಧಗಳ ಮಧ್ಯೆಯೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಗೃಹ ಸಚಿವ ಅಮಿತ್ ಷಾ ಮೂಲಕ ಒತ್ತಡ ಹೇರಿ ಒಪ್ಪಿಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವುದು ಗಮನಾರ್ಹ. ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಯೋಜನೆಗೆ ಸಿಕ್ಕಿರುವುದರಿಂದ ಈ ಭಾಗದಲ್ಲಿ ತನ್ನ ಮತ ಗಳಿಕೆ ಪ್ರಮಾಣ ಹೆಚ್ಚಬಹುದು ಎಂದು ಬಿಜೆಪಿ ಭಾವಿಸಿದೆ. ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಗುದ್ದಲಿ ಪೂಜೆ ನಡೆಸಲು ಕಮಲಪಡೆ ತಯಾರಿ ನಡೆಸಿದೆ ಎಂದು ಮೂಲಗಳು ‘ ತಿಳಿಸಿವೆ.


Spread the love

About Laxminews 24x7

Check Also

ಮಾಜಿ ಸಚಿವ ಮುನೇನಕೊಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನಾ ಧರಣಿ…. ಧಾರವಾಡ ಡಿಸಿ ಕಚೇರಿ ಎದುರು ಧರಣಿ ನಡೆಸುತ್ತಿರುವ ಅನ್ನದಾತರು.*

Spread the love ಮಾಜಿ ಸಚಿವ ಮುನೇನಕೊಪ್ಪ ನೇತೃತ್ವದಲ್ಲಿ ರೈತರ ಪ್ರತಿಭಟನಾ ಧರಣಿ…. ಧಾರವಾಡ ಡಿಸಿ ಕಚೇರಿ ಎದುರು ಧರಣಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ