Breaking News

ಹುಬ್ಬಳ್ಳಿ: ಕಾಂಗ್ರೆಸ್ ಸಮಾವೇಶಕ್ಕೆ ಬಂದ ವ್ಯಕ್ತಿ ಮೇಲೆ ಬಸ್ ಹರಿದು ಸಾವು

Spread the love

ಹುಬ್ಬಳ್ಳಿ: ನಗರದ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ವ್ಯಕ್ತಿ ಮೇಲೆ ಬಸ್ ಹಾಯ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ, ಜೆಸಿ ನಗರದ ಜೋಶಿ ಪೆಟ್ರೋಲ್ ಬಂಕ್ ಎದುರು ಸೋಮವಾರ ನಡೆದಿದೆ.

 

ಮೃತಪಟ್ಟವರು ಅಣ್ಣಿಗೇರಿ ನಿವಾಸಿ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕಿಮ್ಸ್’ಗೆ ದಾಖಲಿಸಲಾಗಿದೆ.

ಸಮಾವೇಶ ನಡೆಯುತ್ತಿದ್ದ ಸ್ಥಳಕ್ಕೆ ತೆರಳುತ್ತಿದ್ದಾಗ ಗದುಗಿನಿಂದ ಗದಗ-ಹುಬ್ಬಳ್ಳಿ ಬಸ್ ಅವರ ಮೇಲೆ ಹಾಯ್ದಿದೆ. ಬಸ್ ಎಡ ಭಾಗದ ಟೈರ್ ವ್ಯಕ್ತಿಯ ತಲೆಮೇಲೆ ಹಾಯ್ದಿದೆ. ಈ ವೇಳೆ ಕೆಲ ಕಾಲ ವಾಹನಗಳ ಸಂಚಾರ ಸ್ಥಗಿತಗೊಂಡು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಬಂದ ಸಂಚಾರ‌ ಠಾಣೆ ಪೊಲೀಸರು ಗಾಯಾಳುಗಳನ್ನು ಆಟೋದಲ್ಲಿ ಆಸ್ಪತ್ರೆಗೆ ಸಾಗಿಸಿದರು.

ಸಮಾವೇಶಕ್ಕೆಂದು ಅಣ್ಣಿಗೇರಿಯಿಂದ ನಾವು ಜೊತೆಯಲ್ಲೇ ಬಂದಿದ್ದೆವು. ನಡೆದುಕೊಂಡು ಹೋಗುತ್ತಿದ್ದಾಗ ಬಸ್ ಹಾಯ್ದಿದೆ ಎಂದು ಅಣ್ಣಿಗೇರಿಯ ನಿವಾಸಿ, ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದರು.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ