Breaking News

ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ:ಸತೀಶ್‌ ಜಾರಕಿಹೊಳಿ

Spread the love

ಯಮಕನಮರಡಿ: ಬಸವಣ್ಣನವರು ಹೇಳಿದಂತೆ ಕಾಯಕದಲ್ಲೇ ಕೈಲಾಸ ಕಾಣುವ ಮೂಲಕ ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ಹಲವು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ ಎಂಬ ಸದುದ್ದೇಶದಿಂದ ಪಂಚಾಯತ್‌ ರಾಜ್ ವ್ಯವಸ್ಥೆ ಜಾರಿಗೆ ಬಂದಿದೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಅವರು ಅಧಿಕಾರದಲ್ಲಿದ್ದಾಗ ಹಳ್ಳಿಗಳ ಅಭಿವೃದ್ಧಿಗೆ ಸಾಕಷ್ಟು ಹಣ ನೀಡಿದ್ದರು ಎಂದು ತಿಳಿಸಿದರು.

ಹೀಗಾಗಿ ಕ್ಷೇತ್ರದ ಎಲ್ಲಾ ಗ್ರಾಮಗಳ ಪ್ರಗತಿಗೆ ನಾನು ಬದ್ಧನಾಗಿದ್ದು, ನಿಮ್ಮ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದರೆ ಅವುಗಳಿಗೆ ಶೀಘ್ರ ಸ್ಪಂದಿಸಲಾಗುದು ಎಂದು ಭರವಸೆ ನೀಡಿದರು.

ಹುದಲಿ ಜಿಪಂ ವ್ಯಾಪ್ತಿಯ ರಂಗಧೋಳಿ ಗ್ರಾಮದಲ್ಲಿ 80. ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ, ಕುಮರಿ ಗ್ರಾಮದ 80 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿ, 50 ಲಕ್ಷ ರೂ. ವೆಚ್ಚದ ಹುದಲಿ ಗ್ರಾಮದ ಮುಖ್ಯ ರಸ್ತೆ ಕಾಮಗಾರಿ. 40 ಲಕ್ಷ‌ ರೂ. ವೆಚ್ಚದ ಹುದಲಿ ಗ್ರಾಮದ ಬಂಡಮ್ಮನ ಗುಡಿಯ ಹೊಲದ ರಸ್ತೆ ಕಾಮಗಾರಿ. ಹುದಲಿ – ಕರವಿನಕುಂಪಿ ಕ್ರಾಸ್‌ ವರೆಗೆ ಸುಮಾರು 5 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿ ಮತ್ತು ಮುಖ್ಯಮಂತ್ರಿ ಗ್ರಾಮ‌ ವಿಕಾಸ ಯೋಜನೆಯಡಿ ಧರನಟ್ಟಿ ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ