ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸುಮಾರು 150 ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಹೆಸರನ್ನು ಸಂಕ್ರಾಂತಿ (ಜ.14) ಕಳೆಯುತ್ತಿದ್ದಂತೆ ಘೋಷಿಸಲು ತಯಾರಿ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ವರಿಷ್ಠರ ಜೊತೆ ಸಮಾಲೋಚಿಸಲು ಬುಧವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.
‘ಬುಧವಾರ ಬೆಳಿಗ್ಗೆ ತುರುವೇಕೆರೆಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಬಳಿಕ ದೆಹಲಿಗೆ ತೆರಳಲಿದ್ದಾರೆ. ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಲಿದ್ದಾರೆ. ಒಟ್ಟಿಗೆ ಭೇಟಿ ಮಾಡಲಿದ್ದಾರೆಯೇ
ಅಥವಾ ಪ್ರತ್ಯೇಕವಾಗಿ ಭೇಟಿ ಮಾಡಲಿದ್ದಾರೆಯೇ ಎಂಬ ಬಗ್ಗೆ ಖಚಿತವಾಗಿಲ್ಲ’ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
‘ಇದೇ 6ರಂದು ಅರಮನೆ ಮೈದಾನದಲ್ಲಿ ಪಕ್ಷದ ‘ನಾ ನಾಯಕಿ’ ಸಮಾವೇಶ ನಡೆಯಲಿದೆ. ಈ ಸಮಾವೇಶಕ್ಕೆ ಪ್ರಿಯಾಂಕಾ ಗಾಂಧಿ ಬರಬೇಕಿತ್ತು. ಆದರೆ, ಅದೇ ದಿನ ಅವರಿಗೆ ಬೇರೆ ಕಾರ್ಯಕ್ರಮ ಇರುವುದರಿಂದ ಜ. 8ರಂದು ಚಿ
ತ್ರದುರ್ಗದಲ್ಲಿ ಪಕ್ಷದ ವತಿಯಿಂದ ಪರಿಶಿಷ್ಟ ಜಾತಿ, ಪಂಗಡಗಳ ಐಕ್ಯತಾ ಸಮಾವೇಶಕ್ಕೆ ಆಹ್ವಾನಿಸಲು ಉದ್ದೇಶಿಸಲಾಗಿದೆ. ಪ್ರಿಯಾಂಕಾ ಗಾಂಧಿ ಅವರನ್ನು ರಾಜ್ಯಕ್ಕೆ ಕರೆದುಕೊಂಡು ಬರುವ ಬಗ್ಗೆಯೂ ಪಕ್ಷದ ನಾಯಕರ ಜೊತೆ ಶಿವಕುಮಾರ್ ಚರ್ಚೆ ನಡೆಸುವ ಸಾಧ್ಯತೆ ಇದೆ’ ಎಂದೂ ಮೂಲಗಳು ಹೇಳಿವೆ.
Laxmi News 24×7