Breaking News

ಡಬಲ್ ಎಂಜಿನ್‌ ಸರ್ಕಾರ ತೆಗೆಯದಿದ್ದರೆ ಸಂಕಷ್ಟ: ಬಡಗಲಪುರ ನಾಗೇಂದ್ರ

Spread the love

ಬಾಗಲಕೋಟೆ: ‘ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್‌ ಎಂಜಿನ್‌ ಸರ್ಕಾರ ಬದಲಾಯಿಸದಿದ್ದರೆ ಮುಂದಿನ ದಿನಗಳಲ್ಲಿ ಸಂಕಷ್ಟ ಹೆಚ್ಚಾಗಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವಾಗಿ, ಉಸಿರಾಡಿಸಲೂ ಕಷ್ಟವಾಗಬಹುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು.

 

ಜನಾಂದೋಲನಗಳ ಮಹಾಮೈತ್ರಿ ಕರ್ನಾಟಕ, ಸಿಟಿಜನ್‌ ಫಾರ್‌ ಡೆಮೊಕ್ರಸಿ, ಜನತಂತ್ರ ಪಯೋಗ ಶಾಲೆ ಹಾಗೂ ಸಂಯುಕ್ತ ಹೋರಾಟ ಮುಖಂಡರು ಸೇರಿಕೊಂಡು ಜಿಲ್ಲೆಯ ಕೂಡಲಸಂಗಮದಿಂದ ಬೆಂಗಳೂರುವರೆಗೆ ಹಮ್ಮಿಕೊಂಡಿರುವ ಸಮಾಜ ಪರಿವರ್ತನ ಸತ್ಯಾಗ್ರಹ ಯಾತ್ರೆಗೆ ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಧಾನಮಂತ್ರಿ, ಮುಖ್ಯಮಂತ್ರಿ ಬದಲಾವಣೆಯಿಂದ ಮಾತ್ರ ಎಲ್ಲ ಬದಲಾಗುವುದಿಲ್ಲ. ವ್ಯವಸ್ಥೆಯನ್ನೇ ಬದಲಾಯಿಸಬೇಕಾದ ಅಗತ್ಯವಿದೆ. ಕೃಷಿ ಕಾಯ್ದೆ ವಾಪಸ್‌ ಪಡೆಯಬೇಕು’ ಎಂದು ಆಗ್ರಹಿಸಿದರು.

ಯಾತ್ರೆ ಸಂಯೋಜಕ ಎಸ್‌.ಆರ್‌. ಹಿರೇಮಠ ಮಾತನಾಡಿ, ‘ಆಹಾರ ಸ್ವಾವಲಂಬನೆಗೆ ರಾಷ್ಟ್ರೀಯ ಭೂಕಬಳಿಕೆ ನೀತಿ ಜಾರಿ, ಕೃಷಿಯೇತರರಿಗೆ ಕೃಷಿ ಭೂಮಿ ನೀಡಬಾರದು. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವುದಲ್ಲದೆ, ಖರೀದಿ ಮಾಡಬೇಕು’ ಎಂದು ಆಗ್ರಹಿಸಿದರು.

‘ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಬದಲಾವಣೆಯಾಗಬೇಕು. ಕೃಷಿ ಹಾಗೂ ಕೂಲಿ ಕಾರ್ಮಿಕರು ಗೌರವಯುತ ಜೀವನ ನಡೆಸುವಂತೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಇದೊಂದು ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ’ ಎಂದರು.

ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಪಾಟೀಲ, ಪತ್ರಕರ್ತ ಡಿ. ಉಮಾಪತಿ, ಶರಣಪ್ಪ ಉದ್ಬಾಳ, ಮಹಮ್ಮದ್ ಯೂಸೂಫ್‌ ಕನ್ನಿ, ನಾಗರತ್ನ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ