Breaking News

ಮೋದಿ ಬಳಿ ನಾಯಿಮರಿಯಂತೆ ಇರ್ತಾರೆ’ : ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

Spread the love

ಳ್ಳಾರಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಎದುರು ನಾಯಿಯಂತೆ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ವಿಪಕ್ಷ ನಾಯಕ ಸಿದ್ದರಾಮಯ್ಯರ ವ್ಯಕ್ತಿತ್ವ ತೋರಿಸುತ್ತೆ.

ನಾಯಿ ನಿಯತ್ತಿನ ಪ್ರಾಣಿ ಎಂಬುದು ಅವರಿಗೆ ಗೊತ್ತಿಲ್ಲ ಅನಿಸುತ್ತೆ. ಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ. ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ. ಸಿದ್ದರಾಮಯ್ಯ ರೀತಿ ಸುಳ್ಳು ಹೇಳಿಕೊಂಡು ನಾನು ತಿರುಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಹಗರಿಬೊಮ್ಮನಹಳ್ಳಿಯ ಕಾರ್ಯಕ್ರಮದಲ್ಲಿ ಮಾತನಾಡಿದಂತ ಸಿದ್ದರಾಮಯ್ಯ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಧಮ್, ತಾಕತ್ ಇದ್ರೆ ಕೇಂದ್ರ ಸರ್ಕಾರದಿಂದ ಅನುದಾನ ತರಲಿ, ಪ್ರಧಾನಿ ಮೋದಿ ಬಳಿ ನಾಯಿಯಂತೆ ಇರ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ