Breaking News

ಬೆಳಗಾವಿ: ಲಿಂಗಾಯತ ಪಂಚಮಸಾಲಿಗಳಿಗೆ 24 ಗಂಟೆಯೊಳಗೆ 2ಎ ಸ್ಥಾನಮಾನ ನೀಡಿ- ಶಾಸಕ ಬಸನಗೌಡ ಪಾಟೀಲ್

Spread the love

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 24 ಗಂಟೆಯೊಳಗೆ 2ಎ ಮೀಸಲಾತಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಡುವು ನೀಡಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಗುರುವಾರ 2ಡಿ ಪಡೆದಿರುವ ಪಂಚಮಸಾಲಿ ಸಮಾಜಕ್ಕೆ ನ್ಯಾಯವೋ ಅನ್ಯಾಯವೋ ಎಂಬ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, 24 ಗಂಟೆಯೊಳಗೆ ಮೀಸಲಾತಿ ನೀಡದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಸ್ಪರ್ಧಿಸಲಿರುವ ಹಾವೇರಿ ಜಿಲ್ಲೆಯ ಶಿಗ್ಗಾಂವ ಕ್ಷೇತ್ರದಿಂದ ಆರಂಭಿಸಲಾಗುವುದು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ‘ಅಮ್ಮನ ಮೇಲೆ ಪ್ರಮಾಣ ಮಾಡಿ ಮೀಸಲಾತಿ ಕೊಡಿಸುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಮುಖ್ಯಮಂತ್ರಿಯಾದ ನಂತರ ಇಲ್ಲಿಯವರೆಗೂ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ, ಯಡಿಯೂರಪ್ಪ ಮಾತು ಕೇಳಿ ನಮಗೆ ಮೋಸ ಮಾಡಿದ್ದಾರೆ’ ಎಂದು ಎಚ್ಚರಿಸಿದರು. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಭವಿಷ್ಯ ನಿರ್ಧರಿಸುವ ಅಂತಿಮ ಹೋರಾಟವಾಗಿದೆ.


Spread the love

About Laxminews 24x7

Check Also

ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ರೈತರ ಸಾಲ ಮನ್ನಾ ಘೋಷಿಸಿದ ತ.ನಾಡು CM ವಿಜಯ್

Spread the loveಚನ್ನೈ: ತಮಿಳುನಾಡಿನ ಸಣ್ಣ ಮತ್ತು ಅತಿ ಸಣ್ಣ ರೈತರು ಸಹಕಾರಿ ಬ್ಯಾಂಕ್‌ಗಳಿಂದ ಪಡೆದಿದ್ದ ₹50,000ವರೆಗಿನ ಬೆಳೆ ಸಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ