Breaking News

ಗಣರಾಜೋತ್ಸವ ಪರೇಡ್‍ನಲ್ಲಿ ಈ ಬಾರಿ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತದೆ; ಸಿಎಂ ಬೊಮ್ಮಾಯಿ ವಿಶ್ವಾಸ

Spread the love

ಮೈಸೂರು: ಗಣರಾಜೋತ್ಸವ ಪರೇಡ್‍ನಲ್ಲಿ ಈ ಬಾರಿ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗುತ್ತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.

ಕರ್ನಾಟಕ ಸ್ತಬ್ಧ ಚಿತ್ರ ಗಣರಾಜ್ಯೋತ್ಸವ ಪರೇಡ್ ಗೆ ನಿರಾಕರಣೆ ವಿಚಾರ: ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದೇನು ಗೊತ್ತಾ?

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಬೇರೆ ಬೇರೆ ರಾಜ್ಯಗಳಿಗೆ ಅವಕಾಶ ಕೊಡಲಾಗುತ್ತದೆ. ಈ ವರ್ಷವೂ ಭಾಗವಹಿಸಲು ಅವಕಾಶ ಕೊಡಿ ಅಂತ ಕೇಳುತ್ತೇವೆ. ಈ ವರ್ಷವೂ ರಾಜ್ಯದ ಸ್ತಬ್ಧ ಚಿತ್ರಕ್ಕೆ ಅವಕಾಶ ಸಿಗಲಿದೆ ಎಂದರು.
ಕಳೆದ 13 ವರ್ಷಗಳಿಂದ ಸತತವಾಗಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳುತ್ತಿದ್ದ ರಾಜ್ಯದ ಸ್ತಬ್ಧಚಿತ್ರಕ್ಕೆ ಈ ಬಾರಿ ಮನ್ನಣೆ ನೀಡಿಲ್ಲ. ಈಗ 13 ವರ್ಷಗಳ ಬಳಿಕ ಕರ್ನಾಟಕ ಅವಕಾಶ ಕಳೆದುಕೊಂಡಿದ್ದು, ಕೇಂದ್ರ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಪ್ರತಿಬಾರಿ ರಾಜ್ಯದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿತ್ತು. ಹಲವು ಬಾರಿ ರಾಜ್ಯ ತಂಡ ಪ್ರಶಸ್ತಿಯನ್ನೂ ಗೆದ್ದಿತ್ತು. ಆದ್ರೀಗ ರಾಜ್ಯವನ್ನು ಕಡೆಗಣಿಸಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗಿದೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ