Breaking News

ಕಾಸರಗೋಡು – ಆನ್ಲೈನ್ ನಲ್ಲಿ ತರಿಸಿದ ಊಟ ತಿಂದು ವಿಧ್ಯಾರ್ಥಿನಿ ಸಾವು.!!

Spread the love

ಮಂಗಳೂರು ಜನವರಿ 07: ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ.

ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ ( 19) ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಶಾಲೆಯ ಬಿ .ಕಾಂ ವಿದ್ಯಾರ್ಥಿನಿಯಾಗಿದ್ದಳು .
ಆರು ದಿನಗಳ ಹಿಂದೆ ಹೋಟೆಲೊಂದರಿಂದ ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥ ಗೊಂಡಿದ್ದರು ಕಾಸರಗೋಡಿನ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.

ಹೊಸವರ್ಷದ ಹಿನ್ನಲೆಯಲ್ಲಿ ಹೋಟೆಲ್ ನಿಂದ ಆನ್ ಲೈನ್ ಮೂಲಕ ಆಹಾರ ಖರೀದಿಸಿ ಕುಟುಂಬದವರ ಜೊತೆ ಸೇವಿಸಿದ್ದು ಆಹಾರ ಸೇವಿಸಿದ್ದ ಎಲ್ಲರಲ್ಲಿ ಅಸ್ವಸ್ಥತೆ ಕಂಡುಬಂದಿತ್ತು . ಆದರೆ ಅಂಜುಶ್ರಿ ತೀವ್ರ ಅಸ್ವಸ್ಥತೆ ಗೊಂಡ ಹಿನ್ನಲೆಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು . ಆದರೆ ಸ್ಥಿತಿ ಗಂಭೀರವಾದುರಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಟೇಲ್ ಮಾಲಿಕ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ