ಚಿತ್ರದುರ್ಗ: ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಚಿತ್ರದುರ್ಗದಲ್ಲಿ ಎಸ್.ಜೆ.ಎಂ ಆಂಗ್ಲ ಮಾಧ್ಯಮ ಶಾಲೆ ಹೆಲಿಪ್ಯಾಡ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರೊಂದಿಗೆ ವಿಸ್ತೃತ ಚರ್ಚೆ ಆಗಿದೆ ಎಂದರು.
ನನಗೆ ಬಂದಿರುವ ಮಾಹಿತಿ ಪ್ರಕಾರ ಆದಷ್ಟೂ ಬೇಗ ಒಂದು ಸಭೆ ನಡೆಸಿ ಈ ಬಗ್ಗೆ ತೀರ್ಮಾನವಾಗಲಿದೆ. ಶೀಘ್ರದಲ್ಲಿ ಆಗುವ ನಿರೀಕ್ಷೆ ಇದೆ. ಸಚಿವ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗುತ್ತಾರೆ ಎನ್ನುವುದು ಹೈಕಮಾಂಡ್ ತೀರ್ಮಾನ ಮಾಡಲಿದೆ. ವಿಚಾರಗಳನ್ನು ವರಿಷ್ಠರಿಗೆ ಮನವರಿಕೆ ಮಾಡಲಾಗಿದೆ. ಸಾಮಾಜಿಕ, ಪ್ರಾದೇಶಿಕ ಪ್ರಾತಿನಿಧ್ಯ ಎಲ್ಲಾ ವಿಚಾರಗಳು ಇವುಗಳ ಬಗ್ಗೆ ಚರ್ಚೆಯಾಗಿದ್ದು ಶೀಘ್ರದಲ್ಲಿ ವಿಸ್ತರಣೆ ಆಗುವ ನಿರೀಕ್ಷೆಯಿದೆ ಎಂದರು.
Laxmi News 24×7