Home / ರಾಜಕೀಯ / ವಿಧಾನ ಸಭೆ ಚುನಾವಣೆ ಗೆ ಸ್ವಾಮೀಜಿ ಗಳಿಗೆ ಟಿಕೆಟ್ ಕೊಡ್ತಾರಾ ಬೊಮ್ಮಾಯಿ ಹೇಳಿದ್ದೇನು..?

ವಿಧಾನ ಸಭೆ ಚುನಾವಣೆ ಗೆ ಸ್ವಾಮೀಜಿ ಗಳಿಗೆ ಟಿಕೆಟ್ ಕೊಡ್ತಾರಾ ಬೊಮ್ಮಾಯಿ ಹೇಳಿದ್ದೇನು..?

Spread the love

ಹಾವೇರಿ:  ಗೋಷ್ಠಿ, ವಿಚಾರಗಳನ್ನು ಸಮ್ಮೇಳನದ ಅಧ್ಯಕ್ಷರ ಮೂಲಕ ಪಡೆದು ಕನ್ನಡ ಸಾಹಿತ್ಯ ಹಾಗೂ ಕನ್ನಡ ನಾಡಿನ ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹಾವೇರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇಂದು ಸಮಾರೋಪಗೊಳ್ಳುತ್ತಿದೆ. ಕಳೆದ ಎರಡು ದಿನಗಳಿಂದ ಸಾಹಿತ್ಯದ ಕಂಪು ಇಡೀ ಕರ್ನಾಟಕಕ್ಕೆ ಪಸರಿಸಿದೆ. ಎರಡು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಿದ್ದು, ವಿವಿಧ ಗೋಷ್ಠಿ ಗಳು ನಡೆದು, ಸಾಹಿತಿಗಳು ಪಾಲ್ಗೊಂಡಿದ್ದಾರೆ. ಇಲ್ಲಿಯ ಯಶಸ್ವಿಯಾಗಿ ನಡೆದಿರುವ ಸಮ್ಮೇಳನಕ್ಕೆ ದುಡಿದ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಸೇರಿದಂತೆ ಎಲ್ಲಾ ಅಧಿಕಾರಿಗಳಿಗೆ ಅಭಿನಂದಿಸುತ್ತೇನೆ. ಸಾಹಿತಿಗಳ ಅನಿಸಿಕೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ವ್ಯವಸ್ಥಿತವಾಗಿ ನನ್ನ ತವರು ಜಿಲ್ಲೆಯಲ್ಲಿ ಎಲ್ಲರೂ ಸೇರಿ ನಡೆಸಿದ್ದು ಸಂತೋಷ ತಂದಿದೆ.ಇದಕ್ಕಾಗಿ ಸಮಸ್ತ ಹಾವೇರಿ ಜಿಲ್ಲೆಯ ಜನರಿಗೆ ಅಭಿನಂದಿಸಿದರು.

ಪರಿಶಿಷ್ಟರ ಆಶೋತ್ತರಗಳಿಗೆ ಸ್ಪಂದನೆ:
ಚುನಾವಣಾ ಅಖಾಡಕ್ಕೆ ಧುಮುಕಿ ಬಹಳ ದಿನಗಳಾಗಿವೆ. ಯಾರ ಆಡಳಿತದಲ್ಲಿ ಯಾರು ಪರಿಶಿಷ್ಟರಿಗೆ ಕಾರ್ಯಕ್ರಮ ನೀಡಿದ್ದಾರೆ. ಏನು ಅನುಷ್ಠಾನವಾಗಿದೆ. ಪರಿಶಿಷ್ಟರ ಬದುಕು ಯಾರ ಕಾಲದಲ್ಲಿ ಎಷ್ಟು ಉತ್ತಮಗೊಂಡಿದೆ. ಅವರ ಹಕ್ಕುಗಳನ್ನು ಯಾರು ರಕ್ಷಿಸಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಜನಾಂಗ ಜಾಗೃತವಾಗಿದ್ದು, ಜಾಗತೀಕರಣದ ನಂತರ ಅವರ ಆಶೋತ್ತರಗಳು ಹೆಚ್ಚಾಗಿದೆ. ಅದಕ್ಕೆ ತಕ್ಕ ಹಾಗೆ ನಮ್ಮ ಸರ್ಕಾರ ಸ್ಪಂದಿಸುವ ಕೆಲಸ ಮಾಡಿದ್ದೇವೆ. ವಿರೋಧ ಪಕ್ಷದವರು ಸಹಜವಾಗಿ ವಿರೋಧಿಸುತ್ತಾರೆ. ಇನ್ನು ಮುಂದೆ ವೋಟ್ ಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ ಎಂದರು.

ಹಿಂಸೆಗೆ ಅವಕಾಶ ಸಲ್ಲದು:
ಬೆಳಗಾವಿಯಲ್ಲಿ ಶ್ರೀರಾಮ ಸೇನೆಯ ಅಧ್ಯಕ್ಷರ ಮೇಲೆ ಗುಂಡಿನ ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪೊಲೀಸರಿಗೆ ಈಗಾಗಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿ ತಪ್ಪಿತಸ್ಥರನ್ನು ಬಂಧಿಸಿ ಕೂಡಲೇ ಕಾರ್ಯಾಚರಣೆ ಮಾಡಲು ತಿಳಿಸಿದೆ. ಭಿನ್ನ ಅಭಿಪ್ರಾಯ ಇದ್ದ ಮಾತ್ರಕ್ಕೆ ಹಿಂಸೆಗೆ ಅವಕಾಶ ನೀಡಬಾರದು. ಶ್ರೀ ರಾಮಸೇನೆ ಜಿಲ್ಲಾಧ್ಯಕ್ಷ ಚಿಕಿತ್ಸೆ ಯ ವೇಚ್ಚ ಭರಿಸಿ, ಅಪರಾಧಿಗಳನ್ನು ಬಂಧಿಸುವ ಕೆಲಸವನ್ನು ಪೊಲೀಸರು ಮಾಡುತ್ತಾರೆ ಎಂದರು.

ಸ್ವಾಮೀಜಿಗಳಿಗೆ ಟಿಕೆಟ್ ನೀಡುವ ಬಗ್ಗೆ ಪ್ರಸ್ತಾಪ ಇಲ್ಲ:
ಸ್ವಾಮೀಜಿಗಳು ಟಿಕೆಟ್ ಆಕಾಂಕ್ಷಿಗಳಾಗಿ ವಿಧಾನಸಭೆಗೆ ಧುಮುಕುವ ಸಾಧ್ಯತೆಗಳಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ನನಗೆ ತಿಳಿದಿಲ್ಲ. ವಿರೋಧ ಪಕ್ಷಗಳು ಏನು ಹೇಳಿವೆ ಎನ್ನುವುದು ತಿಳಿದಿಲ್ಲ ಎಂದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ