Breaking News

ಬಿಜೆಪಿ ಸುಳ್ಳಿಗೆ ಬಲಿಯಾಗಬೇಡಿ. ಬಿಜೆಪಿಗೆ ಸುಳ್ಳೇ ಮನೆ ದೇವರು.

Spread the love

ಚಿತ್ರದುರ್ಗ: ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಸಮಾಜದವರು ಅಧಿಕಾರಕ್ಕೆ ಬಂದಂತೆ. ಈ ಐಕ್ಯತಾ ಸಮಾವೇಶ ಇಡೀ ದೇಶಕ್ಕೆ ಸಂದೇಶ ರವಾನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ಚಿತ್ರದುರ್ಗದಲ್ಲಿ ನಡೆದ ಐಕ್ಯತಾ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಅವರು ಈ ನೆಲದಲ್ಲಿ ಭಾರತ ಜೋಡೋ ಯಾತ್ರೆ ಮಾಡಿದರು. ಆಗ ನೀವು ತೋರಿದ ಪ್ರೀತಿ, ವಿಶ್ವಾಸ ದೇಶಾದ್ಯಂತ ಶಕ್ತಿ ತುಂಬಿದೆ. ಈ ಐಕ್ಯತಾ ಸಮಾವೇಶ ಭಾರತ ಜೋಡೋ ಯಾತ್ರೆ ಜತೆಯಲ್ಲಿ ಜನ ಹೆಜ್ಜೆ ಹಾಕುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿ ಎಂದರು.

ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ದಲಿತ ಶಕ್ತಿ ಕಾಂಗ್ರೆಸ್ ಶಕ್ತಿಯಾಗಿದೆ. ದಲಿತರೆಲ್ಲರೂ ಈ ಬೃಹತ್ ಆಂದೋಲನದಲ್ಲಿ ದೊಡ್ಡ ಶಕ್ತಿಯಾಗಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಕಾಂಗ್ರೆಸ್ ಪಾಲಿಸಿಕೊಂಡು, ರಕ್ಷಿಸಿಕೊಂಡು ಬಂದಿದೆ. ಸಂವಿಧಾನ ಈ ದೇಶದ ಆಸ್ತಿ.

 

ಇಂದು ಖರ್ಗೆ ಸಾಹೇಬರ ಮುಖಂಡತ್ವದಲ್ಲಿ ಕಾಂಗ್ರೆಸ್ ಮುಂದೆ ಸಾಗುತ್ತಿದೆ. ಖರ್ಗೆ ಅವರು ಅಲಂಕರಿಸಿರುವ ಸ್ಥಾನ ಸಾಮಾನ್ಯದ್ದಲ್ಲ. ಈ ದೇಶದ ಇತಿಹಾಸದಲ್ಲಿ ಮಹಾತ್ಮ ಗಾಂಧಿ, ಸುಭಾಷ್ ಚಂದ್ರ ಬೋಸ್, ಇಂದಿರಾ ಗಾಂಧಿ, ಬಾಬು ಜಗಜೀವನ್ ರಾಮ್, ಸೋನಿಯಾ ಗಾಂಧಿ, ರಾಜೀವ್ ಗಾಂಧಿ, ರಾಹುಲ್ ಗಾಂಧಿ ಅವರು ಅಲಂಕರಿಸಿದ ಸ್ಥಾನವನ್ನು ಖರ್ಗೆ ಅವರು ಅಲಂಕರಿಸಿದ್ದಾರೆ. 50 ವರ್ಷಗಳ ಕಾಲ ಶಾಸಕರಾಗಿ, ಎಲ್ಲ ವರ್ಗದ ಜನರಿಗೆ ನ್ಯಾಯ ಒದಗಿಸಿ, ಕಾಂಗ್ರೆಸ್ ಪಕ್ಷಕ್ಕೆ ಪ್ರಾಮಾಣಿಕರಾಗಿ, ದೇಶದ ಐಕ್ಯತೆ, ಸಮಗ್ರತೆಯಲ್ಲಿ ಹೆಜ್ಜೆ ಹಾಕಿದ ಖರ್ಗೆ ಅವರನ್ನು ದೇಶದುದ್ದಗಲಕ್ಕೂ ಆಶೀರ್ವಾದ ಮಾಡಿ ಈ ಸ್ಥಾನಕ್ಕೆ ಆರಿಸಲಾಗಿದೆ. ಅವರ ಮುಖಂಡತ್ವದಲ್ಲಿ ಕಾಂಗ್ರೆಸ್ ಸಾಗುತ್ತಿದೆ.


Spread the love

About Laxminews 24x7

Check Also

ಕೈದಿಗಳಿಗೆ ರಾಜಾತಿಥ್ಯ ಸಿಎಂ, ಗೃಹ ಸಚಿವರು ರಾಜೀನಾಮೆ ನೀಡಲಿ: B.J.P.

Spread the love ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯ ಖಂಡಿಸಿ ಇಂದು ಸಿಎಂ ಮನೆಗೆ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ