Breaking News

ಸಿದ್ದರಾಮಯ್ಯ ಕ್ಷೇತ್ರ ಘೋಷಣೆ: ಕೋಲಾರವೇ ಅಂತಿಮ?

Spread the love

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು(ಜ.8) ತಾವು ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ಆಪ್ತ ಮೂಲಗಳ ಪ್ರಕಾರ, ಸೋಮವಾರ ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಆ ಬಳಿಕ ನೇರವಾಗಿ ಕೋಲಾರಕ್ಕೆ ತೆರಳಲಿದ್ದಾರೆ‌.

ಆ ಬಳಿಕ ಅಲ್ಲಿನ ಸ್ಥಳೀಯ‌ ಮುಖಂಡರ ಜತೆ ಸೇರಿ‌ ಕೋಲಾರದಿಂದಲೇ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಕೋಲಾರ ಅಥವಾ ವರುಣಾ ಪೈಕಿ ಒಂದು ಕಡೆ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ವರುಣಾ ಕ್ಷೇತ್ರ ತ್ಯಾಗಕ್ಕೆ ಅವರ ಪುತ್ರ ಕೂಡಾ ತಯಾರಾಗಿದ್ದರು. ಆದರೆ ಪುತ್ರನ ರಾಜಕೀಯ ಪಯಣಕ್ಕೆ ಅಲ್ಪ ವಿರಾಮ ಹಾಕಲು ಒಪ್ಪದ ಸಿದ್ದರಾಮಯ್ಯ, ಕೋಲಾರದಿಂದಲೇ ಸ್ಪರ್ಧೆ ಮಾಡಲು ನಿರ್ಧರಿಸಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ