Breaking News

ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನ; ನಾಳೆ ಸಾಗರ ಟೌನ್‌ ಬಂದ್

Spread the love

ಶಿವಮೊಗ್ಗ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸೋಮವಾರ (ಜ.9 ರಂದು) ನಡೆದಿದೆ.

ಸಾಗರ ನಗರ ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಎಂಬುವವರ ಮೇಲೆ ಸಮೀರ್ ಎನ್ನುವ ಯುವಕ ಸಾಗರ ನಗರದ ಬಿ.ಹೆಚ್.

ರಸ್ತೆಯ ಬಸ್ ನಿಲ್ದಾಣ ಸಮೀಪ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್‌ ಪಾರಾಗಿದ್ದಾರೆ.

ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಸುನೀಲ್‌ ಭಾಗಿಯಾಗಿದ್ದ, ಯಾತ್ರೆ ಹೋಗುವ ವೇಳೆ ಸುನೀಲ್‌ ಅವರೊಂದಿಗೆ ಕಿರಿಕ್‌ ಮಾಡಿಕೊಂಡಿದ್ದ ಸಮೀರ್‌, ಅದೇ ನೆಪವನ್ನಿಟ್ಟುಕೊಂಡು ಸುನೀಲ್‌ ಮೇಲೆ ಹಲ್ಲೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಮಚ್ಚು ಬೀಸಿರುವ ದೃಶ್ಯ ಸಿಸಿಟಿಟವಿಯಲ್ಲಿ ಸೆರೆಯಾಗಿದ್ದು, ಘಟನೆ ಬಳಿಕ ಸಮೀರ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ಸಾಗರ ಪೊಲೀಸ್‌ ಠಾಣೆಯಲ್ಲಿ ಸುನೀಲ್‌ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ