Breaking News

ಬೆಂಗಳೂರು: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್‌ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿರ್ಧರಿಸಿದೆ. ‘ಸಿಬಿಆರ್‌ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದರು. ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ನಿರ್ಣಯಿಸಿದಂತೆ, ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

Spread the love

ಬೆಂಗಳೂರು: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್‌ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿರ್ಧರಿಸಿದೆ.

 

‘ಸಿಬಿಆರ್‌ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದರು.

ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ನಿರ್ಣಯಿಸಿದಂತೆ, ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ