Breaking News

ಬಿಜೆಪಿ ವಿರುದ್ಧ ‘ಕೈ’ ಹೋರಾಟ: ಕಾಂಗ್ರೆಸ್‌ ನಾಯಕರಿಂದ ರಾಜ್ಯ ಪ್ರವಾಸ

Spread the love

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಇದೇ 11ರಿಂದ ರಾಜ್ಯ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಆರಂಭಿಸಲಿದ್ದು, ಅದಕ್ಕೆ ಸಂಬಂಧಿಸಿ​ ಕಾಂಗ್ರೆಸ್​ ಪ್ರವಾಸ ಸಮಿತಿಯ ಸಭೆ ನಗರದ ಖಾಸಗಿ ಹೋಟೆಲ್​ನಲ್ಲಿ ಸೋಮವಾರ ನಡೆಯಿತು.

 

ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕವೆಂದು ವಿಭಾಗ ಮಾಡಿಕೊಂಡು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ಯಾತ್ರೆ ಕೈಗೊಳ್ಳಲಿದ್ದಾರೆ.

ರಾಜ್ಯದ ವಿವಿಧ ಕಡೆ ನಿರಂತರ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ, ಮುಂದಿನ 100 ದಿನ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ. ಸ್ಥಳೀಯವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಆಯಾ ಭಾಗದ ಹಿರಿಯ ಮುಖಂಡರು, ಮಾಜಿ ಸಚಿವರು, ಶಾಸಕರು ಪ್ರತ್ಯೇಕವಾಗಿ ಯಾತ್ರೆಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಇಂಥ ಪ್ರವಾಸದ ಮೂಲಕ ಮತದಾರರನ್ನು ಸಂಪರ್ಕಿಸಿ, ವಿಶ್ವಾಸ ಗಳಿಸಲು ಪ್ರಯತ್ನಿಸಬೇಕು ಎಂದೂ ಸೂಚನೆ ನೀಡಲಾಗಿದೆ.

ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಧ್ರುವನಾರಾಯಣ, ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಇದ್ದರು


Spread the love

About Laxminews 24x7

Check Also

ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿ – ಆರ್​​ಎಸ್​​ಎಸ್ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ: ಡಿಸಿಎಂ

Spread the loveಬೆಂಗಳೂರು : ನಾನು ಅಪ್ಪಟ ಕಾಂಗ್ರೆಸಿಗ. ಹುಟ್ಟಿನಿಂದ ಕಾಂಗ್ರೆಸ್​ ಪಕ್ಷದಲ್ಲಿದ್ದೇನೆ. ಜೀವ ಇರುವ ತನಕವೂ ಕಾಂಗ್ರೆಸಿಗನಾಗಿಯೇ ಇರುತ್ತೇನೆ. ನನ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ