Breaking News
Home / ಹುಬ್ಬಳ್ಳಿ / ಅಂತ್ಯೋದಯ, BPL’ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಅಂತ್ಯೋದಯ, BPL’ ಪಡಿತರ ಚೀಟಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

Spread the love

ಧಾರವಾಡ : ಪಡಿತರ ಫಲಾನುಭವಿಗಳಿಗೆ ಜನೆವರಿ-2023ನೇ ಮಾಹೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ವಿತರಣೆಯನ್ನು ಮಾಡಲಾಗುತ್ತಿದೆ. ಎನ್‍ಎಫ್‍ಎಸ್‍ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 15 ಕೆಜಿ ಅಕ್ಕಿ ಮತ್ತು ಬಿಪಿಎಲ್ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ.

 

ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗೆ ಅನುಗುಣವಾಗಿ ಹಂಚಿಕೆಯಾಗಿರುವ ಆಹಾರಧಾನ್ಯದ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವುದು. ವಿತರಣೆಯಾಗುವ ಆಹಾರಧಾನ್ಯ ಕಡಿಮೆ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಕಾರರು ನೀಡಿದಲ್ಲಿ ಧಾರವಾಡ ಪಡಿತರ ಪ್ರದೇಶದ ಆಹಾರ ನಿರೀಕ್ಷಿಕರು 8088737170, ಧಾರವಾಡ ತಾಲ್ಲೂಕು ಆಹಾರ ಶಿರಸ್ತೇದಾರ 9845202400, 8310109795 ಹಾಗೂ ಅಳ್ನಾವರ 9448221892. ಹುಬ್ಬಳ್ಳಿ ಪಡಿತರ ಪ್ರದೇಶದ ಆಹಾರ ನಿರೀಕ್ಷಕರು 9611123128. 8310490713, 9886320360, 9482532326, ಕಲಘಟಗಿ 9741304522, ಕುಂದಗೋಳ 8618525185, ನವಲಗುಂದ 9902142458 ಹಾಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆಹಾರ ಶಾಖೆ 0836 2444594ಗೆ ದೂರು ಸಲ್ಲಿಸಿದಲ್ಲಿ ಅಂತವರ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಹಂತಕ ಗಿರೀಶ್ ಗೂ ಅಂಜಲಿಗೂ 15 ದಿನಗಳ ಮೊದಲೇ ಮದುವೆಯಾಗಿತ್ತು!

Spread the love ಹುಬ್ಬಳ್ಳಿ: ಮೇ 15ರ ನಸುಕಿನ ಜಾವ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ