Breaking News

ನೀರಿನ ಸಂಪಿಗೆ ಬಿದ್ದು ನರ್ಸರಿ ಓದುವ ಮಕ್ಕಳಿಬ್ಬರು ಸಾವು

Spread the love

ಬೆಳಗಾವಿ: ನಿರ್ಮಾಣದ ಹಂತದಲ್ಲಿದ್ದ ಕಟ್ಟಡದ ನೀರಿನ ಸಂಗ್ರಹದ ಸಂಪ್ ದಲ್ಲಿ ಬಾಲಕರಿಬ್ಬರು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಸವದತ್ತಿಯಲ್ಲಿ ಮಂಗಳವಾರ ನಡೆದಿದೆ.

ಮಂಗಳವಾರದಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಸೌದತ್ತಿ ನಗರ ಗುರ್ಲ್ ಹೊಸೂರು ವಾರ್ಡಿನಲ್ಲಿರುವ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಭವನದಲ್ಲಿ ಈ ದುರ್ಘಟನೆ ನಡೆದಿದೆ.

 

ಕಟ್ಟಡದ ನೀರು ಸಂಗ್ರಹ ಮಾಡುವ ಸಂಪಿನಲ್ಲಿ ಪ್ರಗತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಖಾಸಗಿ ಶಾಲೆಯ ನರ್ಸರಿ ಓದುತ್ತಿರುವ ಶ್ಲೋಕ ಶಂಭುಲಿಂಗಪ್ಪ ಗುಡಿ (4 ವರ್ಷ) ಹಾಗೂ ಚಿದಾನಂದ ಪ್ರಕಾಶ ಸಾಲುಂಕೆ (4 ವರ್ಷ) ಆಟವಾಡುತ್ತಾ ಹೋಗಿ ಆಕಸ್ಮಿಕವಾಗಿ ನೀರು ತುಂಬಿರುವ ಸಂಪಿನಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ಸವದತ್ತಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ