Breaking News

ಫೆ.17 ರಂದು ರಾಜ್ಯ ಬಜೆಟ್ ಮಂಡನೆ : ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ

Spread the love

ಹುಬ್ಬಳ್ಳಿ : ರಾಜ್ಯ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಮುಂದಿನ ತಿಂಗಳ 3 ನೇ ವಾರ ಬಜೆಟ್ ಮಂಡಿಸಲಾಗುವುದು.

ಈಗಾಗಲೇ ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.

ಏಪ್ರಿಲ್,ಮೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಬಾರಿ ಸಿಎಂ ಬೊಮ್ಮಾಯಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಬೊಮ್ಮಾಯಿ ಅವರು ಮುಂಬರುವ ಬಜೆಟ್ ಗೆ ಸಿದ್ಧತೆ ಆರಂಭಿಸಿದ್ದು, ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನ ಕುರಿತು ಸಭೆ ನಡೆಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ