Breaking News

ಆರೋಗ್ಯ ತಪಾಸಣೆ ಶಿಬಿರ ಇಂದು

Spread the love

ಅಥಣಿ: ಕೆಎಲ್‌ಇ ಸಂಸ್ಥೆಯ ಎಸ್‌ಎಂಎಸ್ ಮಹಾವಿದ್ಯಾಲಯದಲ್ಲಿ

. 11ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಎಸ್‌ಎಂಎಸ್ ಮಹಾವಿದ್ಯಾಲ
ಯದ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಹಂಜಿ ತಿಳಿಸಿದರು.

ಇಲ್ಲಿನ ಎಸ್‌ಎಂಎಸ್ ಮಹಾವಿದ್ಯಾಲಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರದ ಕರಪತ್ರ ಬಿಡುಗಡೆಗೊಳಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಲ್‌ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಅವರ ಜನ್ಮ

ದಿನದ ಅಮೃತ ಮಹೋತ್ಸವದ ಅಂಗವಾಗಿ ಕೆಎಲ್‌ಇ ವಿಶ್ವವಿದ್ಯಾಲಯ, ಜವಾಹರಲಾಲ್ ನೆಹರೂ ವೈದ್ಯಕೀಯ ಮಹಾವಿದ್ಯಾಲಯ, ಡಾ.ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ
ಅಥಣಿ ಪಟ್ಟಣದ ಕೆಎಲ್‌ಇ ಅಂಗ ಸಂಸ್ಥೆಗಳ ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದರು.

ಕೆಎಲ್‌ಇ ಆಸ್ಪತ್ರೆಯಿಂದ 140ಕ್ಕೂ ಅಧಿಕ ತಜ್ಞ ವೈದ್ಯರು ಆಗಮಿಸಲಿದ್ದಾರೆ. ವೈದ್ಯಕೀಯ ತಪಾಸಣೆ, ಶಸ್ತ್ರ ಚಿಕಿತ್ಸೆ, ಬಿಪಿ
ಮತ್ತು ಇಸಿಜಿ, ರಕ್ತ ತಪಾಸಣೆ ಮತ್ತು ಉಚಿತ ಔಷಧಿ ನೀಡುವ ವ್ಯವಸ್ಥೆ ಇದೆ ಎಂದು ತಿಳಿಸಿದರು.

ಪ್ರಾಚಾರ್ಯ ಡಾ.ಬಿ.ಎಸ್. ಕಾಂಬಳೆ, ಶಿಬಿರಕ್ಕಾಗಿ ಮಹಾವಿದ್ಯಾಲಯದಲ್ಲಿ
ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ 9353008029, 9448338015, 9448121845 ಸಂಪರ್ಕಿಸಬೇಕು ಎಂದರು.

ಸಿಎಸ್‌ಕೆ ಪ್ರೌಢ ಶಾಲೆಯ ತಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಅಲ್ಲಪ್ಪಣ್ಣ ನಿಡೋಣಿ, ಮಹಾವಿದ್ಯಾಲಯದ ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರು ಇದ್ದರು.


Spread the love

About Laxminews 24x7

Check Also

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

Spread the love ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ