Breaking News

ಬಿಜೆಪಿಗೆ ಬಿಗ್ ಶಾಕ್ : ಹಳ್ಳಿ ಹಕ್ಕಿ ‘ವಿಶ್ವನಾಥ್’ ಕಾಂಗ್ರೆಸ್ ಸೇರ್ಪಡೆಗೆ ಮಹೂರ್ತ ಫಿಕ್ಸ್..!

Spread the love

ರಾಯಚೂರು : ಬಿಜೆಪಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ (H.Vishwanath ) ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ತೊರೆದು ಜೆಡಿಎಸ್ ತೊರೆದು ಶಾಸಕರಾಗಿ ಆಯ್ಕೆಯಾಗಿ ಸಮ್ಮಿಶ್ರ ಸರ್ಕಾರದ ಪತನದ ಸಮಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಇದೀಗ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ .

 

ಈ ಕುರಿತು ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು ನನ್ನ ರಕ್ತವೇ ಕಾಂಗ್ರೆಸ್ ಎಂದಿದ್ದಾರೆ. ಉತ್ತರಾಯಣದಂದು ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ. ಅದಕ್ಕಾಗಿಯೇ ರಾಯರ ದರ್ಶನ ಪಡೆದಿದ್ದೇನೆ ಎಂದು ಹೇಳಿಕೆ ನೀಡಿದ್ದು, ಕಾಂಗ್ರೆಸ್ ಸೇರ್ಪಡೆ ಫಿಕ್ಸ್ ಆಗಿದೆ. ವಿಶ್ವನಾಥ್ ಅವರು ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು. ಹೆಚ್ ವಿಶ್ವನಾಥ್ ಅವರು ಏಕಾಏಕಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ