Breaking News

ಮದ್ಯ ಖರೀದಿ ವಯಸ್ಸಿನ ಮಿತಿ 21 ರಿಂದ 18ಕ್ಕೆ ಇಳಿಕೆ

Spread the love

ಬೆಂಗಳೂರು: 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ ಎಂಬ ನಿರ್ಬಂಧವನ್ನು ಸಡಿಲಿಸಿ ವಯಸ್ಸಿನ ಮಿತಿಯನ್ನು 18 ವರ್ಷಗಳಿಗೆ ಇಳಿಕೆ ಮಾಡಲು ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ಕ್ಕೆ ತಿದ್ದುಪಡಿ ತರಲಾಗುತ್ತಿದೆ.

 

ಅಬಕಾರಿ ನಿಯಮಗಳಿಗೆ ತಿದ್ದುಪಡಿ ತರಲು ಇಲಾಖೆಯು ಸಿದ್ಧಪಡಿಸಿರುವ ಕರಡು ಪ್ರತಿಯನ್ನು ಸೋಮವಾರ (ಜನವರಿ 9) ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕ ಅಬಕಾರಿ ಪರವಾನಗಿಗಳು (ಸಾಮಾನ್ಯ ಷರತ್ತುಗಳು) ನಿಯಮಗಳು-1967ರ ಸೆಕ್ಷನ್‌ 10 (1) (ಇ) ಅಡಿಯಲ್ಲಿ ಮದ್ಯ ಖರೀದಿದಾರನ ವಯಸ್ಸಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲಿಸುವ ಉಲ್ಲೇಖ ತಿದ್ದುಪಡಿ ಕರಡಿನಲ್ಲಿದೆ.

’21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ’ ಎಂದು ಸೆಕ್ಷನ್‌ 10 (1) (ಇ)ನಲ್ಲಿ ಹೇಳಲಾಗಿತ್ತು. ಅದನ್ನು ಬದಲಿಸಿ, ’18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವಂತಿಲ್ಲ’ ಎಂಬುದನ್ನು ಸೇರಿಸುವ ಪ್ರಸ್ತಾವ ಇದೆ.

ಹೆದ್ದಾರಿಯಿಂದ 500 ಮೀ. ಅಂತರ:

ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು 5,000ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಗ್ರಾಮ ಪಂಚಾಯಿತಿಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳ ಅಂಚಿನಿಂದ 500 ಮೀಟರ್‌ವರೆಗಿನ ಪ್ರದೇಶದಲ್ಲಿ ಹೊಸ ಮದ್ಯದಂಗಡಿ ತೆರೆಯುವುದನ್ನು ನಿರ್ಬಂಧಿಸಿರುವುದನ್ನು ಅಬಕಾರಿ ನಿಯಮಗಳ ವ್ಯಾಪ್ತಿಗೆ ತರಲಾಗುತ್ತಿದೆ.

ಹೆದ್ದಾರಿಗಳ ಅಂಚಿನಿಂದ 500 ಮೀಟರ್‌ವರೆಗೆ ಮದ್ಯದಂಗಡಿಗಳನ್ನು ನಿಷೇಧಿಸಿ ಸುಪ್ರೀಂ ಕೋರ್ಟ್‌ 2016ರಲ್ಲಿ ತೀರ್ಪು ನೀಡಿತ್ತು. ನಗರ ಸ್ಥಳೀಯ ಸಂಸ್ಥೆಗಳು ಮತ್ತು 5,000ಕ್ಕಿಂತ ಹೆಚ್ಚು ಜನಸಂಖ್ಯೆ ಇರುವ ಪ್ರದೇಶಗಳಲ್ಲಿ ನಿರ್ಬಂಧಿತ ಪ್ರದೇಶದ ಮಿತಿಯನ್ನು 220 ಮೀಟರ್‌ಗೆ ಪರಿಷ್ಕರಿಸಿ 2017ರಲ್ಲಿ ಸುಪ್ರೀಂ ಕೋರ್ಟ್‌ ಮತ್ತೊಂದು ಆದೇಶ ಹೊರಡಿಸಿತ್ತು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ