Breaking News

ಡಾ.ವಿಷ್ಣುವರ್ಧನ್ ಸ್ಮಾರಕ: 13 ವರ್ಷಗಳ ಹೋರಾಟ ಸಾರ್ಥಕ, ಅಭಿಮಾನಿಗಳ ಸಂಭ್ರಮ

Spread the love

ಮೈಸೂರು: ಚಲನಚಿತ್ರ ನಟ ದಿ. ವಿಷ್ಣುವರ್ಧನ್‌ ಅವರ ಸ್ಮಾರಕದ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿರುವುದು ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಕಲಿಕೆಯ ತಾಣವಾಗುವ ಮಹತ್ವಾಕಾಂಕ್ಷೆಯೊಂದಿಗೆ ಜಿಲ್ಲೆಯ ಎಚ್‌.ಡಿ.ಕೋಟೆ ರಸ್ತೆಯಲ್ಲಿರುವ ಉದ್ಬೂರು ಬಳಿಯ ಹಾಲಾಳು ಗ್ರಾಮದಲ್ಲಿ ‘ಸಾಹಸ ಸಿಂಹ ದಿ.

ಡಾ.ವಿಷ್ಣುವರ್ಧನ್ ಸ್ಮಾರಕ ಭವನ’ ನಿರ್ಮಾಣವಾಗಿದೆ. ಅಂತಿಮ ಹಂತದ ಕಾಮಗಾರಿಗಳು ಪ್ರಗತಿಯಲ್ಲಿವೆ.

2020ರ ಸೆ.15ರಂದು ಸ್ಮಾರಕ ನಿರ್ಮಾಣಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವರ್ಚುವಲ್‌ ವೇದಿಕೆಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದರು. ಕರ್ನಾಟಕ ಪೊಲೀಸ್ ವಸತಿ ನಿಗಮವು ₹ 11 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಿಸಿದೆ. 5 ಎಕರೆಯಲ್ಲಿ ಸ್ಮಾರಕವಿದೆ. ಎರಡು ಎಕರೆಯಲ್ಲಿ ತಳಮಹಡಿ, ನೆಲಮಹಡಿ ಸೇರಿ ಒಟ್ಟು 27ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ಸ್ಮಾರಕ ಕಟ್ಟಡ ತಲೆ ಎತ್ತಿದೆ. ವಿಷ್ಣುವರ್ಧನ್‌ ಅವರು ನಿಂತಿರುವ ಭಂಗಿಯ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಕೃಷ್ಣಶಿಲೆಯಲ್ಲಿ ಕೆತ್ತಿದ್ದಾರೆ. ಸ್ಮಾರಕವನ್ನು ‘ಎಂ9 ಡಿಸೈನ್ ಸ್ಟುಡಿಯೊ’ದ ನಿಶ್ಚಲ್ ಅವರು ವಿನ್ಯಾಸಗೊಳಿಸಿದ್ದಾರೆ. ಸಭಾಂಗಣ, ಕಲಾವಿದರ ಕೊಠಡಿ, ತರಗತಿಗಳೂ ಇವೆ. ಸ್ಮಾರಕ ಉದ್ಘಾಟನೆಗೊಳ್ಳುವಾಗ ಇಲ್ಲಿ ವಿಷ್ಣುವರ್ಧನ್‌ ಅವರ ಚಿತಾಭಸ್ಮವನ್ನೂ ತಂದಿಡಲಾಗುತ್ತದೆ. ಮೈಸೂರಿನ ಪ್ರವಾಸಿ ತಾಣಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಾಗಲಿದೆ.

‘ಜ.29ರಂದು ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸುವರು. ಆರಂಭದಲ್ಲಿ ಪೋಟೊ ಗ್ಯಾಲರಿ, ಪ್ರತಿಮೆ, ಥಿಯೇಟರ್‌ ಉದ್ಘಾಟಿಸುವರು. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಥಿಯೇಟರ್ ಒಳಗೆ 250 ಮಂದಿಯಷ್ಟೆ ಕುಳಿತುಕೊಳ್ಳಲು ಸಾಧ್ಯವಿರುವುದರಿಂದ ಹೊರಭಾಗದಲ್ಲಿ ಕಾರ್ಯಕ್ರಮ ನಡೆಸುವ ಸಂಬಂಧ ಶೀಘ್ರದಲ್ಲೇ ಸಭೆ ನಡೆಸಿ ತೀರ್ಮಾನಿಸಲಾಗುವುದು’ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಡಾ.ವಿಷ್ಣುವರ್ಧನ್‌ ಪ್ರತಿಷ್ಠಾನದ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ