Breaking News

ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. C.M.

Spread the love

ಬೆಂಗಳೂರು: ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ ಚಾಲನೆ ನೀಡಲಾಗುವುದು.

ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.

ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರತೀ ಕುಟುಂಬಕ್ಕೆ ಮನೆ ನಡೆಸಲು ವಿಶೇಷ ಕಾರ್ಯಕ್ರಮವನ್ನು ಹೆಣ್ಣು ಮಕ್ಕಳಿಗೆ ನೀಡಲಾಗುವುದು. ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್ ಉಪಚಾರ, ಆರೋಗ್ಯ, ಮುಂತಾದವುಕ್ಕೆ ಸಹಾಯವಾಗುವ ವಿಶೇಷ ಯೋಜನೆ ಇದಾಗಿದೆ. ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು 1000, 1500, 2000, ಎಷ್ಟು ವೆಚ್ಚವಾಗುತ್ತದೆ ಎನ್ನುವುದನ್ನು ಪರಿಗಣಿಸಿ ಮನೆಯ ಜವಾಬ್ದಾರಿ ನೋಡಿಕೊಳ್ಳುವ ಮಹಿಳೆಗೆ ನೀಡಲಾಗುವುದು. ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಮೊದಲು ಚಾಲನೆಗೊಳಿಸಿ ಅದನ್ನು ಅನುಷ್ಠಾನ ಗೊಳಿಸಿ, ಪ್ರತಿ ಮನೆಗೆ ಸ್ತ್ರೀಯರ ಹೆಸರಿನಲ್ಲಿ ಸಹಾಯ ನೀಡಲಾಗುವುದು ಎಂದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ