Breaking News

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ.!

Spread the love

ಬೆಂಗಳೂರು: ವಿಧಾನಸಭೆ ಚುನಾವಣೆಯನ್ನು ಗುರಿಯಾಗಿಸಿ, ಮಹಿಳೆಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿ ವತಿಯಿಂದ ಆಯೋಜಿಸಿರುವ ‘ನಾ ನಾಯಕಿ’ ಕಾರ್ಯಕ್ರಮದಲ್ಲಿ ಪ್ರತಿ ಮನೆಯ ಗೃಹಿಣಿಗೆ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಿಡುಗಡೆ ಮಾಡಿದ್ದಾರೆ.

 

ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಅಗತ್ಯ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಘೋಷಣೆ ಮಾಡಲು ರಾಜ್ಯ ಕಾಂಗ್ರೆಸ್ ತೀರ್ಮಾನಿಸಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಮಹಿಳೆಯರ ಸಂಕಷ್ಟಕ್ಕೆ ಪ್ರಮಾಣದ ನೆರವು ನೀಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡಿದೆ. ಈ ಯೋಜನೆ ಮೂಲಕ ರಾಜ್ಯದ ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಸರ್ಕಾರದ ವತಿಯಿಂದ ಪ್ರತಿ ತಿಂಗಳು 2,000ರಂತೆ ವರ್ಷಕ್ಕೆ 24 ಸಾವಿರ ಆರ್ಥಿಕ ನೆರವನ್ನು ಕಾಂಗ್ರೆಸ್ ಸರ್ಕಾರ ಒದಗಿಸಲು ನಿರ್ಧರಿಸಿದೆ. ಈ ಯೋಜನೆಯಿಂದ ರಾಜ್ಯದ 1.5 ಕೋಟಿ ಗೃಹಿಣಿಯರಿಗೆ ನೆರವಾಗಲಿದೆ.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ