Breaking News

ಜನಾರ್ದನ ರೆಡ್ಡಿಯೇ ನಿಂತರೂ ಬಿಜೆಪಿಯಿಂದ ನಾನು ಸ್ಪರ್ಧಿಸುತ್ತೇನೆ: ಸೋಮಶೇಖರ ರೆಡ್ಡಿ

Spread the love

ಳ್ಳಾರಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿಯವರೇ ಸ್ವತಃ ಬಂದು ನಿಂತರೂ ನಾನು ಸ್ಪರ್ಧಿಸುವೆ ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಸವಾಲು ಹಾಕುವ ಮೂಲಕ ಬಹಿರಂಗವಾಗಿ ರಣಕಹಳೆ ಮೊಳಗಿಸಿದರು.

 

ರಾಜ್ಯ ಸರ್ಕಾರ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸ್ವಲ್ಪ ತಾಳ್ಮೆ ವಹಿಸಿದ್ದರೆ ಜನಾರ್ದನ ರೆಡ್ಡಿ ಪರಿಸ್ಥಿತಿ ಈ ರೀತಿ ಆಗುತ್ತಿರಲಿಲ್ಲ. ಹೊಸ ಪಕ್ಷ ಕಟ್ಟುವ ಅವಶ್ಯಕತೆ ಇರಲಿಲ್ಲ. ಜನಾರ್ದನ ರೆಡ್ಡಿ ದುಡುಕಿದ್ದಾರೆ. ಯಾರ ಮಾತು ಕೇಳುತ್ತಿಲ್ಲ. ಈ ವಿಷಯದಲ್ಲಿ ಜನಾರ್ದನ ರೆಡ್ಡಿ ತಪ್ಪು ಮಾಡಿದ್ದಾರೆ ಎಂದು ಸಹೋದರನ ದುಡುಕಿನ ನಿರ್ಧಾರಗಳ ಬಗ್ಗೆ ಸೋಮಶೇಖರ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ಮಾಜಿ ಸಚಿವ ಜನಾರ್ದನ ರೆಡ್ಡಿ ಮನವೊಲಿಸುವ ಕೆಲಸ ಸಚಿವ ಶ್ರೀರಾಮುಲು, ನಾನು ಮಾಡುತ್ತಿದ್ದೇವೆ. ಆದರೂ, ಯಾರ ಮಾತು ಕೇಳದವರಿಗೆ ಏನು ಹೇಳಬೇಕು?, ಬಳ್ಳಾರಿ ನಗರ ಕ್ಷೇತ್ರದಿಂದ ಜನಾರ್ದನ ರೆಡ್ಡಿ ಪತ್ನಿ ಅಲ್ಲ, ಸ್ವತಃ ಜನಾರ್ದನ ರೆಡ್ಡಿ ಬಂದರೂ ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವೆ ಎಂದು ಬಹಿರಂಗವಾಗಿ ಸವಾಲು ಹಾಕಿದರು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ