Breaking News

ಯಾದಗಿರಿ, ಕಲಬುರಗಿಗೆ ಇಂದು ಪ್ರಧಾನಿ ಮೋದಿ ಭೇಟಿ

Spread the love

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ (ಜ.19) ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಕೊಡೆಕಲ್‌ಗೆ ಮಧ್ಯಾಹ್ನ 12ಕ್ಕೆ ಆಗಮಿಸುವರು.

ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನಿಕ ಕಾಮಗಾರಿ ಲೋಕಾರ್ಪಣೆ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ್‌-ಚೆನ್ನೈ ಎಕ್ಸ್‌ಪ್ರೆಸ್‌ ವೇ ಪ್ಯಾಕೇಜ್‌-3 ಕಾಮಗಾರಿ ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸುವರು. ‌

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವರು ಮತ್ತು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು. 51,000 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರಾಜ್ಯಪಾಲ ಥಾವರಚಂದ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ, ಮುರುಗೇಶ ನಿರಾಣಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ‌.ರಾಜೀವ ಮತ್ತು ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸುವರು.


Spread the love

About Laxminews 24x7

Check Also

ನಾಲ್ವಾರ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಸಿಎಂ ಭೇಟಿ – ಸಿದ್ದರಾಮಯ್ಯಗೆ ಚಿನ್ನದ ಉಂಗುರ ತೊಡಿಸಿ ಸತ್ಕಾರ

Spread the loveಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸುಕ್ಷೇತ್ರ ನಾಲ್ವಾರ ಗ್ರಾಮದ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ