Breaking News

ವಿಧಾನಸಭೆ ಚುನಾವಣೆ | ಪ್ರತಿ ಜಿಲ್ಲೆಗೂ ಪ್ರತ್ಯೇಕ ಪ್ರಣಾಳಿಕೆ ಬೊಮ್ಮಾಯಿ

Spread the love

ಬೆಂಗಳೂರು: ಪ್ರತಿ ಜಿಲ್ಲೆಗಳಿಂದಲೂ ಮಾಹಿತಿ ತರಿಸಿಕೊಂಡು ಪಕ್ಷದ ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷದ ಪ್ರಮುಖ ನಾಯಕರ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

 

‘ಪ್ರಣಾಳಿಕೆ ಸಿದ್ಧಪಡಿಸುವುದು, ಬಜೆಟ್‌ ಅಧಿವೇಶನ, ಪಕ್ಷದ ಸಂಘಟನೆ, ಜನ ಸಂಕಲ್ಪ ಯಾತ್ರೆಯ ಮುಂದುವರಿಕೆ, ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಲಾಗಿದೆ. ಶನಿವಾರದಿಂದ (ಜ.21) ಪ್ರಾರಂಭವಾಗುವ ಬೂತ್‌ಮಟ್ಟದ ವಿಜಯಸಂಕಲ್ಪ ಯಾತ್ರೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಭಾಗವಹಿಸುವರು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಪಟ್ಟಿಯನ್ನು ಮನೆ ಮನೆಗೆ ತಲುಪಿಸಲಾಗುವುದು. ತಾಲ್ಲೂಕು ಮಟ್ಟದ ಸಮ್ಮೇಳನ, ಹಲವು ಮೋರ್ಚಾಗಳ ಜಿಲ್ಲಾಮಟ್ಟದ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ’ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ